ETV Bharat / state

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ವಿದೇಶಕ್ಕೆ ಪರಾರಿ - ಬಂಟ್ವಾಳ ಆಪ್ರಾಪ್ತೆ ಮೇಲೆ ಯುವಕನಿಂದ ಅತ್ಯಾಚಾರ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದ ವ್ಯಕ್ತಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ವಿದೇಶಕ್ಕೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಪತ್ತೆಗಾಗಿ ಶೋಧಕಾರ್ಯ ನಡೆದಿದೆ.

rape-on-a-minor-girl-in-bantwal
ಅಪ್ರಾಪ್ತೆ ಮೇಲೆ ಅತ್ಯಾಚಾರ
author img

By

Published : Sep 7, 2021, 3:21 PM IST

ಬಂಟ್ವಾಳ(ದಕ್ಷಿಣ ಕನ್ನಡ): ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ಹಾರಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಬಿ.ಸಿ. ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾಗಿದ್ದ. ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಮಸೂದ್​​​ ಪತ್ತೆಗೆ ಬಂಟ್ವಾಳ ಪೊಲೀಸ್ ಇನ್ಸ್​ಪೆಕ್ಟರ್ ಟಿ.ಡಿ. ನಾಗರಾಜ್ ನೇತೃತ್ವದ ತಂಡ ಶೋಧ ಕಾರ್ಯ ನಡೆಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.