ಬಂಟ್ವಾಳ(ದಕ್ಷಿಣ ಕನ್ನಡ): ಇಬ್ಬರು ಯುವಕರು ಅಪ್ತಾಪ್ತೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ಫೊಟೋವನ್ನು ಕ್ಲಿಕ್ಕಿಸಿ, ಬಹಿರಂಗಪಡಿಸುವುದಾಗಿ ಬೆದರಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.
2020ರ ಜನವರಿ ತಿಂಗಳಿನಲ್ಲಿ ಆರೋಪಿ ಅಬೂಬಕ್ಕರ್ ಸಿದ್ದಿಕ್ ಆತನ ಸ್ನೇಹಿತ ಚಪ್ಪಿ ಎಂಬವರು ಫೋನ್ ಮುಖಾಂತರ ಬಾಲಕಿಯ ಜತೆ ಸಲುಗೆಯಿಂದ ಮಾತನಾಡಿ ಜ.25ರ ರಾತ್ರಿ ಮನೆಯಿಂದ ಹೊರಬರಲು ಹೇಳಿದ್ದರು.
ಇದನ್ನೂ ಓದಿ: ಬಸ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು
ಈ ವೇಳೆ ಬಾಲಕಿ ಹೊರಬಂದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವೇಳೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ದುರುಳರು, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಹೆದರಿಸಿದ್ದರು.
ಇಬ್ಬರೂ ಪರಾರಿಯಾಗಿದ್ದು, ಆರೋಪಿಗಳಿಗಾಗಿ ವಿಟ್ಲ ಪೊಲೀಸರು ಬಲೆ ಬೀಸಿದ್ದಾರೆ.