ಪುತ್ತೂರು: ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುರದ ಮಹಮ್ಮದ್ ಹನೀಫ್ (67) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. 20 ವರ್ಷದ ಯುವಕನ ಮೇಲೆ ಮಹಮ್ಮದ್ ಹನೀಫ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.
ಸದ್ಯ ಯುವಕನ ತಂದೆ ನೀಡಿದ ದೂರಿನ ಮೆರೆಗೆ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.