ETV Bharat / state

ಇನ್​ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ - ಬಾಲಕಿ ಮೇಲೆ ಅತ್ಯಾಚಾರ

ಸಂತ್ರಸ್ತ ಬಾಲಕಿಯ ಶಿಕ್ಷಣ ಹಾಗೂ ಭವಿಷ್ಯಕ್ಕೆ 3 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್ ಅಪರಾಧಿಗೆ ಸೂಚಿಸಿದೆ.

Mangalore Additional Sessions Court
ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ
author img

By

Published : Mar 25, 2023, 3:13 PM IST

ಮಂಗಳೂರು: ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌(30) ಶಿಕ್ಷೆಗೊಳಗಾದ ಅಪರಾಧಿ.

ದಯಾನಂದ ದಾನಣ್ಣನವರ್ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದನು. ಹೀಗೆ ಪರಿಚಯವಾದ ಬಾಲಕಿಗೆ 2022ರ ಜ.27ರಂದು ಹೊರಗೆ ತಿರುಗಾಡುವುದಕ್ಕೆ ಬರುವಂತೆ ಸಂದೇಶವನ್ನು ಕಳುಹಿಸಿದ್ದ. ಬಾಲಕಿ ಇದಕ್ಕೆ ನಿರಾಕರಿಸಿದರೂ ಒತ್ತಾಯ ಮಾಡಿ ಪುಸಲಾಯಿಸಿ ಜ.28ರಂದು ಆಟೋರಿಕ್ಷಾದಲ್ಲಿ ಮಂಗಳೂರಿನ ಹಂಪನಕಟ್ಟೆಗೆ ಕರೆದೊಯ್ದು ಲಾಡ್ಜ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನು.

ಅತ್ಯಾಚಾರದ ಘಟನೆಯನ್ನು ಮನೆಯಲ್ಲಿ ಹೇಳಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಆ ಬಳಿಕ ಬಾಲಕಿ ಮನೆಯಲ್ಲಿ ನಡೆದ ವಿಷಯ ತಿಳಿಸಿದ್ದಳು. ಮನೆಯವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣಾ ಪೊಲೀಸರು ದಯಾನಂದ ದಾನಣ್ಣನವರ್​ನನ್ನು ಬಂಧಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು ದಯಾನಂದ ದಾನಣ್ಣವರ್​ನನ್ನು ದೋಷಿ ಎಂದು ತೀರ್ಮಾನಿಸಿ ಪೋಕ್ಸೋ ಕಲಂ 4ರಡಿ 20 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡವನ್ನು ವಿಧಿಸಿದೆ. ದಂಡ ಪಾವತಿಸಲು ತಪ್ಪಿದರೆ ಮತ್ತೆ 4 ತಿಂಗಳು ಕಠಿಣ ಸಜೆಯನ್ನು ವಿಧಿಸಲಾಗಿದೆ. ಅಲ್ಲದೆ ನೊಂದ ಬಾಲಕಿಗೆ ಮೂರು ಲಕ್ಷ ರೂ. ಪರಿಹಾರ ನೀಡಬೇಕು. ಅದರಲ್ಲಿ 1 ಲಕ್ಷ ರೂ. ಅನ್ನು ಕೂಡಲೇ ಬಿಡುಗಡೆ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಉಳಿದ ಎರಡು ಲಕ್ಷ ರೂ.ಗಳನ್ನು ಆಕೆಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಲಾಗಿದೆ.

ಮಹಿಳಾ ಠಾಣೆಯ ಪೊಲೀಸ್‌ ನಿರೀಕ್ಷಕರಾಗಿದ್ದ ಎಸ್‌.ಹೆಚ್‌. ಭಜಂತ್ರಿ ಮತ್ತು ರೇವತಿ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ಸರ್ಕಾರದ ಪರವಾಗಿ ವಾದ ಮಾಡಿದ್ದರು.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ: ಸಹೋದರರು ಸೇರಿ 7 ಮಂದಿಗೆ 10 ವರ್ಷ ಜೈಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.