ಕಡಬ: ಹೊಲಿಗೆ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಅರುಣ್ (22) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಇದರಿಂದ ಬಾಲಕಿಯು ಗರ್ಭಿಣಿಯಾದ್ದಾಳೆ ಎಂದು ಕಡಬ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.
ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.