ಸುಬ್ರಹ್ಮಣ್ಯ : ನ್ಯಾಯಬೆಲೆ ಅಂಗಡಿಯಲ್ಲಿ ದೊರಕುವ ಅಕ್ಕಿಗಾಗಿ ಗ್ರಾಮೀಣ ಭಾಗದ ಜನರು ಪರದಾಡುವ ದೃಶ್ಯ ಸಾಮಾನ್ಯವಾಗಿದೆ.
ರೇಶನ್ ನೀಡಲು ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಲ್ಯಾಪ್ಟಾಪ್ನೊಂದಿಗೆ ಗುಡ್ಡ ಹತ್ತಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಕೊಂಬಾರು ಗ್ರಾಮದಲ್ಲಿ ನಡೆದಿದೆ.
ಸರ್ಕಾರದ ಆದೇಶದಂತೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ದಿನಸಿ ವಸ್ತುಗಳ ಖರೀದಿಗೆ ಅವಕಾಶವಿದ್ದರೂ, ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ನೆಟ್ವರ್ಕ್ ಇಲ್ಲದೇ ಪಡಿತರ ದೊರೆತಿಲ್ಲ. ಬಿಎಸ್ಎನ್ಎಲ್ ಹಾಗೂ ಏರ್ಟೆಲ್ ನೆಟ್ವರ್ಕ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಬಂದ ಗ್ರಾಹಕರು ಪಡಿತರ ಸಿಗದೆ ಸಂಕಷ್ಟಕೀಡಾಗಿದ್ದಾರೆ.
ಇತ್ತ ನ್ಯಾಯಬೆಲೆ ಅಂಗಡಿಯ ಸಿಬ್ಬಂದಿ ಜನರ ಸಂಕಷ್ಟವನ್ನು ಮನಗಂಡು ಲ್ಯಾಪ್ಟಾಪ್ ಹಿಡಿದುಕೊಂಡು ಗುಡ್ಡಕ್ಕೆ ಹತ್ತಿದರೂ ಯಾವುದೇ ಪ್ರಯೋಜನವಾಗಿಲ್ಲ.