ಬಂಟ್ವಾಳ: ಕಳೆದ ಎರಡು ದಿನಗಳ ಹಿಂದೆ ಕುಸಿದು ಬಿದ್ದಿರುವ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆಯ ಪುನರ್ ನಿರ್ಮಾಣವನ್ನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.
ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಶೀಘ್ರವೇ ತಜ್ಞರ ಸಲಹೆ ಪಡೆಯಲಾಗುವುದು ಎಂದರು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಹದಿನೈದು ದಿನಗಳ ಒಳಗಾಗಿ ದೇವಸ್ಥಾನಕ್ಕೆ ಗಣಿಗಾರಿಕೆಯಿಂದ ಅಪಾಯ ಉಂಟಾಗಿರುವ ಕುರಿತ ಗ್ರಾಮಸ್ಥರ ಆತಂಕದ ಕುರಿತು ಪರಾಮರ್ಶೆ ನಡೆಸಲಾಗುವುದು ಎಂದರು. ತನ್ನ ಶಿಫಾರಸಿನ ಅನ್ವಯ ತಾಲೂಕಿನಲ್ಲಿ ಕಾರಿಂಜ ದೇವಸ್ಥಾನ ಸಹಿತ ಈಗಾಗಲೇ ನಾಲ್ಕು ಕ್ಷೇತ್ರಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದ್ದು, ಕಾರಿಂಜ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಹೇಳಿದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಆಡಳಿತಾಧಿಕಾರಿ ನೋಣಯ್ಯ ನಾಯ್ಕ್, ಗ್ರಾಮಣಿಯರಾದ ಗಣಪತಿ ಮುಚ್ಚಿನ್ನಾಯ, ವೆಂಕಟರಮಣ ಮುಚ್ಚಿನ್ನಾಯ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶಿವಪ್ಪ ಗೌಡ ನಿನ್ನಿ ಕಲ್ಲು, ಅರ್ಚಕರಾದ ಜಯಶಂಕರ ಉಪಾಧ್ಯಾಯ, ಮಿಥುನ್ ರಾಜ್ ನಾವಡ, ಪ್ರಮುಖರಾದ ಮೋಹನ ಆಚಾರ್ಯ, ಚಿದಾನಂದ ರೈ, ಕೆ.ರಾಜಗೋಪಾಲ ನಾಯಕ್, ಸದಾಶಿವ ಪ್ರಭು, ದಿನೇಶ್ ಶೆಟ್ಟಿ ಕಾವಳಕಟ್ಟೆ, ಪ್ರವೀಣ ಪೂಜಾರಿ, ಸೂರ್ಯಹಾಸ ಆಚಾರ್ಯ, ರಾಮಕೃಷ್ಣ ಮಯ್ಯ, ರಾಧಾಕೃಷ್ಣ ಮಯ್ಯ, ಚಂದ್ರಶೇಖರ ಶೆಟ್ಟಿ ಕ್ಷೇತ್ರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರವೀಶ ಶೆಟ್ಟಿ, ಡೊಂಬಯ್ಯ ಅರಳ ಮತ್ತು ಸಿಬಂದಿ ವರ್ಗ ಉಪಸ್ಥಿತವಿತ್ತು.