ETV Bharat / state

ಹಿಂದೂಯೇತರರಿಗೆ ದೇವಸ್ಥಾನಗಳ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನಿರಾಕರಣೆ: ದೂರು ನೀಡಿದ್ರೆ ಕ್ರಮ ಎಂದರು ಪೊಲೀಸ್ ಕಮಿಷನರ್

ಹಿಂದೂಯೇತರರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ನಿರ್ಧಾರ ತೆಗೆದುಕೊಂಡ ಹಿನ್ನೆಲೆ ದೇವಸ್ಥಾನಗಳ ಮುಂಭಾಗ ಬ್ಯಾನರ್​​ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಸಂಬಂಧ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿದ್ದು,ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ..

police commissioner of mangaluru N. Shashikumar
ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್
author img

By

Published : Mar 22, 2022, 4:19 PM IST

Updated : Mar 23, 2022, 12:25 PM IST

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಜಾತ್ರೋತ್ಸವ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡದೆ, ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿದ್ದಾರೆ.

ಎಲ್ಲಾ ಕಡೆಗಳಲ್ಲಿ ಈಗ ಜಾತ್ರೋತ್ಸವ ಸಂಭ್ರಮವಿದೆ. ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ, ಕಾಟಿಪಳ್ಳ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.

ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್

ಹಿಂದೂಯೇತರರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ನಿರ್ಧಾರ ತೆಗೆದುಕೊಂಡ ಹಿನ್ನೆಲೆ ದೇವಸ್ಥಾನಗಳ ಮುಂಭಾಗ ಬ್ಯಾನರ್​​ಗಳನ್ನು ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಅಕ್ರಮವಾಗಿ ದೈವಸ್ಥಾನ ಪ್ರವೇಶಿಸಿ ಅಂಗಣ ಸುತ್ತ ರಕ್ತ ಹರಿಸಿದ್ದ ವ್ಯಕ್ತಿ ಬಂಧನ

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ, ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶೀಲ್ದಾರ್​​ರೊಂದಿಗೆ ಮಾತನಾಡಿದ್ದೇವೆ. ಬ್ಯಾನರ್​​ನ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ.‌

ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಶ್ರೀ ಬಪ್ಪನಾಡು ಆಡಳಿತ ಮಂಡಳಿ ನಿಯಮದ ಪ್ರಕಾರ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ ಎಂದು ಹೇಳಿದರು.

Last Updated : Mar 23, 2022, 12:25 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.