ETV Bharat / state

ಮಲೈಕಾ ಸೊಸೈಟಿಯಿಂದ ಗ್ರಾಹಕರಿಗೆ ಕೋಟ್ಯಂತರ ರೂ‌. ವಂಚನೆ ಆರೋಪ : ಮ್ಯಾನೇಜರ್ ಬಂಧನ

author img

By

Published : Nov 22, 2020, 10:53 PM IST

ಮಲೈಕಾ ಸೊಸೈಟಿ ಸಂಸ್ಥೆ ಮುಂಬೈ, ಮಂಗಳೂರು, ಉಡುಪಿ ಸಹಿತ ವಿವಿಧೆಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಹೊಂದಿದೆ. ಆಕರ್ಷಕ ಗರಿಷ್ಠ ಬಡ್ಡಿ ನೀಡುವ ಆಮಿಷ ತೋರಿಸಿ 800ಕ್ಕೂ ಅಧಿಕ ಮಂದಿಯಿಂದ 350 ಕೋಟಿ ರೂ.ಗಿಂತಲೂ ಅಧಿಕ ಹಣ ಠೇವಣಿ ಇಡುವಂತೆ ಮಾಡಿದ್ದಾರೆ..

Reina Josh's arrest by Economic and Narcotic Police
ಮಲೈಕಾ ಸೊಸೈಟಿ

ಮಂಗಳೂರು: ಗ್ರಾಹಕರಿಂದ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿ ಅವಧಿ ಪೂರ್ಣಗೊಂಡಾಗ ಅದನ್ನು ಹಿಂದಿರುಗಿಸದೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಲೈಕಾ ಸೊಸೈಟಿ ಸಂಸ್ಥೆಯ ಮಂಗಳೂರು ಶಾಖೆಯ ಮ್ಯಾನೇಜರ್‌ನ ಇಕನಾಮಿಕ್ ಅಂಡ್ ನಾರ್ಕೊಟಿಕ್ ಪೊಲೀಸರು ಬಂಧಿಸಿ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಮಲೈಕಾ ಸೊಸೈಟಿ ಸಂಸ್ಥೆಯ ಮಂಗಳೂರು ಶಾಖೆಯ ಮ್ಯಾನೇಜರ್ ರೀನಾ ಜೋಶ್ ಬಂಧಿತ ಆರೋಪಿ. ಮ್ಯಾನೇಜರ್‌ನ ಬಂಧಿಸಿರುವ ಪೊಲೀಸರು ಮಲೈಕಾ ಸೊಸೈಟಿಯ ಬೆಂದೂರ್ ವೆಲ್‌ನಲ್ಲಿರುವ ಪ್ರಧಾನ ಕಚೇರಿಗೆ ಕರೆತಂದು ತನಿಖೆ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಅಲ್ಲದೆ, ಮಲೈಕಾ ಸೊಸೈಟಿ ಸಂಸ್ಥೆಯ ಸ್ಥಾಪಕ ಗಿಲ್ಬರ್ಟ್ ಬ್ಯಾಪಿಸ್ಟ್ ಹಾಗೂ ಈತನ ಪತ್ನಿ ಮರ್ಸಿಲಿನ್ ಬ್ಯಾಪಿಸ್ಟ್ ಸೇರಿದಂತೆ ಆಡಳಿತ ಮಂಡಳಿಯ 12 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಮಲೈಕಾ ಸೊಸೈಟಿ ಸಂಸ್ಥೆ ಮುಂಬೈ, ಮಂಗಳೂರು, ಉಡುಪಿ ಸಹಿತ ವಿವಿಧೆಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಹೊಂದಿದೆ. ಆಕರ್ಷಕ ಗರಿಷ್ಠ ಬಡ್ಡಿ ನೀಡುವ ಆಮಿಷ ತೋರಿಸಿ 800ಕ್ಕೂ ಅಧಿಕ ಮಂದಿಯಿಂದ 350 ಕೋಟಿ ರೂ.ಗಿಂತಲೂ ಅಧಿಕ ಹಣ ಠೇವಣಿ ಇಡುವಂತೆ ಮಾಡಿದ್ದಾರೆ.

ಠೇವಣಿಯ ಬಡ್ಡಿ ಹಿಂದಿರುಗಿಸುವ ಸಮಯವಾದರೂ ಹಣವನ್ನು ಹಿಂದಿರುಗಿಸದೆ ಮೋಸ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.