ಕೂಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೂಳೂರು ಫ್ಲೈ ಓವರ್ ರಸ್ತೆಯ ದುರಸ್ತಿ ಕಾರ್ಯ ಆರಂಭವಾಗಿದ್ದು, ಇದರಿಂದಾಗಿ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ.
ಕೂಳೂರಿನಿಂದ ಪಣಂಬೂರು ಎಂಸಿಎಫ್ವರೆಗೂ ವಾಹನಗಳ ಸಾಲು ಸಾಲಾಗಿ ನಿಂತಿದ್ದವು. ಕೂಳೂರಿನ ಮೇಲ್ಸೇತುವೆ ಪಕ್ಕದ ಸರ್ವಿಸ್ ರಸ್ತೆಯಲ್ಲಿ ವಾಹನಗಳು ತೆರಳಲು ಅವಕಾಶವಿದ್ದರೂ, ಅತಿಯಾದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ಹರಸಾಹಸಪಟ್ಟರು.