ಮಂಗಳೂರು (ದ.ಕ): ಮೊದಲ ಹಂತದ ಕೋವಿಡ್-19 ವ್ಯಾಕ್ಸಿನೇಷನ್ಗಾಗಿ ಆದ್ಯತೆಯ ಮೇರೆಗೆ ಗುರುತಿಸಲಾದ ವಿಭಾಗಗಳಲ್ಲಿನ ಬಾಕಿ ಇರುವ ಅಧಿಕಾರಿಗಳು, ಸಿಬ್ಬಂದಿ ತಮ್ಮ ವಿವರಗಳನ್ನು ಈ ಕೂಡಲೇ ನೋಂದಣಿ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ತಿಳಿಸಿದೆ. ಇದಕ್ಕಾಗಿ ಜ.7ರಂದು ರಾತ್ರಿ 12ಗಂಟೆಯೊಳಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ನೋಂದಣಿಯನ್ನು dkrcho.covidvacc2020@gmail.com ಮೈಲ್ ಮಾಡಲು ಕೋರಲಾಗಿದೆ.
ದ.ಕ ಜಿಲ್ಲೆಯಲ್ಲಿ ಮೊದಲ ಹಂತದ ಕೋವಿಡ್-19 ವ್ಯಾಕ್ಸಿನೇಷನ್ಗಾಗಿ ಎಲ್ಲಾ ಸರ್ಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ನರ್ಸಿಂಗ್ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ, ವಿದ್ಯಾರ್ಥಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 39,604 ಮಂದಿಯನ್ನು ಕೋವಿನ್ ಪೋರ್ಟಲ್ನಲ್ಲಿ ನೋಂದಣಿಯಾಗಿದೆ.
ನೋಂದಣಿ ಬಾಕಿಯಿರುವವರು ಮೈಲ್ಗೆ ಮಾಹಿತಿ ನೀಡುವಂತೆ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಕೋವಿನ್ ಆ್ಯಪ್‌ನಲ್ಲಿ ನೋಂದಣಿ ಮಾಡಿಸಿದ 75 ಜನರಿಗೆ ಲಸಿಕೆ ತಾಲೀಮು