ETV Bharat / state

ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ - ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ

3 ತಿಂಗಳಿಂದ ದಿಗ್ಭಂಧನದಲ್ಲಿರಿಸಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿದ್ದಾರೆ.

woman rescuse
ಮಹಿಳೆ ರಕ್ಷಣೆ
author img

By ETV Bharat Karnataka Team

Published : Jan 3, 2024, 10:57 AM IST

Updated : Jan 3, 2024, 2:38 PM IST

ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

ಪುತ್ತೂರು(ದಕ್ಷಿಣ ಕನ್ನಡ): ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿದ್ದಾರೆ. ಮಹಿಳೆಯನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶ್ರೀಪತಿ ಹೆಬ್ಬಾರ್ ಎಂಬುವರ ಪತ್ನಿಯನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ 3 ತಿಂಗಳಿನಿಂದ ದಿಗ್ಬಂಧನದಲ್ಲಿರಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನಾಮಧೇಯ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆಗೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್​​ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೇತ ಮೈಮೇಲೆ ಬರುವ ನೆಪ?: ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್​ ಅವರು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಮಹಿಳೆಯನ್ನುಅಂತರ್ಜಾತಿ ವಿವಾಹವಾಗಿದ್ದರು. ಈ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೆಟ್​ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಈ ರೀತಿ ದಿಗ್ಭಂಧನದಲ್ಲಿರಿಸಲಾಗಿತ್ತು. ಸುದೀರ್ಘ ಸಮಯದಿಂದ ಸ್ನಾನ ಮಾಡಿಸದ ರೀತಿ, ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ದೊರಕಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

Last Updated : Jan 3, 2024, 2:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.