ETV Bharat / state

ಪುತ್ತೂರು ಸಮೀಪ ಚಲಿಸುತ್ತಿದ್ದ ರೈಲಲ್ಲಿ ದರೋಡೆ : ಕಳ್ಳನನ್ನು ಹಿಡಿಯುವ ಭರದಲ್ಲಿ ರೈಲಿನಿಂದ ಬಿದ್ದು ಮಹಿಳೆಗೆ ಗಾಯ - ಪುತ್ತೂರು ಸಮೀಪ ಚಲಿಸುತ್ತಿದ್ದ ರೈಲಲ್ಲಿ ದರೋಡೆ

ಚಲಿಸುತ್ತಿದ್ದ ರೈಲಿನಲ್ಲಿ ದರೋಡೆ ಮಾಡಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದಿನೊಂದಿಗೆ ದರೋಡೆಕೋರ ಪರಾರಿಯಾಗಿದ್ದಾನೆ. ಕಳ್ಳನನ್ನು ಹಿಡಿಯುವ ಭರದಲ್ಲಿ ರೈಲಿನಿಂದ ಕೆಳಗೆ ಬಿದ್ದು ಮಹಿಳೆಗೆ ಗಾಯವಾಗಿದೆ.

ರೈಲಿನಲ್ಲಿ ದರೋಡೆ
ರೈಲಿನಲ್ಲಿ ದರೋಡೆ
author img

By

Published : Aug 30, 2022, 6:09 PM IST

Updated : Aug 30, 2022, 6:48 PM IST

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ದರೋಡೆ ಪ್ರಕರಣ ಜರುಗಿದೆ. ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್​​ ಅನ್ನು ದರೋಡೆಕೋರನೊಬ್ಬ ದೋಚಿ ಪರಾರಿಯಾಗಿದ್ದಾನೆ. ಈ ಘಟನೆ ಕಬಕ ಮತ್ತು ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ 1.ಕಿಮೀ ದೂರದ ಹಾರಾಡಿ, ಸಿಟಿ ಗುಡ್ಡೆ ಮಧ್ಯೆ ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ನಡೆದಿದೆ.

ಘಟನೆಯ ವಿವರ: ಆ.30ರ ನಸುಕಿನ ಜಾವ 2.30ರ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಕಾರವಾರ ಮೂಲದವರಾದ ಅಧ್ಯಾಪಕ ರಮೇಶ್ ಮತ್ತು ನಿರ್ಮಲಾ ದಂಪತಿ ಚಿನ್ನಾಭರಣ ಮತ್ತು ನಗದಿದ್ದ ವ್ಯಾನಿಟಿ ಬ್ಯಾಗ್ ಕಳೆದುಕೊಂಡಿದ್ದಾರೆ. ಆ.29ರಂದು ರಾತ್ರಿ ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲನ್ನು ದಂಪತಿ ಹತ್ತಿದ್ದಾರೆ. ಆ.30ರ ನಸುಕಿನ ಜಾವ 2.20ರ ಸುಮಾರಿಗೆ ರೈಲು ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಬಂದಿದೆ.

20.30ರ ಸುಮಾರಿಗೆ ರೈಲು ಕಾರವಾರಕ್ಕೆ ಹೊರಟ ವೇಳೆ ಪುತ್ತೂರು ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತುಲುಪುತ್ತಿದ್ದಂತೆ, ನಿರ್ಮಲಾ ಅವರು ಮಲಗುವ ವೇಳೆ ತಲೆಯ ಅಡಿಯಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ನಗದು ಇರಿಸಿದ್ದ ವ್ಯಾನಿಟಿ ಬ್ಯಾಗ್‌ ಅನ್ನು ಅಪರಿಚಿತ ವ್ಯಕ್ತಿ ಎಳೆಯುತ್ತಿರುವುದನ್ನು ಗಮನಿಸಿದ್ದಾರೆ. ಬಳಿಕ ಗಾಬರಿಗೊಂಡು ಆ ವ್ಯಕ್ತಿಯನ್ನು ದೂಡಿದ್ದಾರೆ.

ಇದನ್ನೂ ಓದಿ: ಸಿಗ್ನಲ್​ಗೆ ಬಟ್ಟೆ ಕಟ್ಟಿ, ಸಿಕಂದರಾಬಾದ್​​-ಮುಂಬೈ ಎಕ್ಸ್​​ಪ್ರೆಸ್​​ ರೈಲು ನಿಲ್ಲಿಸಿ ಕಳ್ಳರ ದರೋಡೆ

ನಿರ್ಮಲಾ ಅವರ ಕುತ್ತಿಗೆಯಲ್ಲಿದ್ದ ವ್ಯಾನಿಟಿ ಬ್ಯಾಗ್​​ನೊಂದಿಗೆ ಆತ ರೈಲು ಬೋಗಿಯಿಂದ ಹಾರಲೆತ್ನಿಸಿದ್ದಾನೆ. ಆಗ ಆತನನ್ನು ಹಿಡಿದ ಮಹಿಳೆಯು ತುರ್ತು ಸಂದರ್ಭದಲ್ಲಿ ರೈಲು ನಿಲ್ಲಿಸುವ ಚೈನ್ ಎಳೆದಿದ್ದಾರೆ. ರೈಲಿನ ವೇಗ ನಿಧಾನವಾಗುತ್ತಿದ್ದಂತೆ ಅಪರಿಚಿತ ವ್ಯಕ್ತಿ ರೈಲಿನಿಂದ ಹಾರಿದ್ದಾನೆ. ಇದರ ಜೊತೆಗೆ ಮಹಿಳೆಯೂ ಆಯ ತಪ್ಪಿ ರೈಲಿನಿಂದ ಹಳಿಯ ಮೇಲೆ ಬಿದ್ದಿದ್ದಾರೆ.

ವ್ಯಕ್ತಿ ಮಾತ್ರ ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರಮೇಶ್ ಮತ್ತು ನಿರ್ಮಲಾ ನೀಡಿದ ದೂರಿನಂತೆ ರೂ. 40 ಸಾವಿರ ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ರೂ ಮೌಲ್ಯದ ಸೊತ್ತು ದರೋಡೆ ಮಾಡಲಾಗಿದೆಯಂತೆ. ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Aug 30, 2022, 6:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.