ETV Bharat / state

ಜ್ಯುವೆಲ್ಲರಿ ದರೋಡೆಗೆ ಸಂಚು: ಮಂಗಳೂರಿನಲ್ಲಿ ಸಾಹೇಬ್‌ಗಂಜ್ ಗ್ಯಾಂಗ್‌ನ 9 ಮಂದಿ ಬಂಧನ - ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ

ಖಚಿತ ಮಾಹಿತಿ ಪಡೆದ ಸಿಸಿಬಿ ಘಟಕದ ಪೊಲೀಸ್ ಇನ್​ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿದ್ದಾರೆ.

Arrested accused
ಬಂಧಿತ ಆರೋಪಿಗಳು
author img

By

Published : Dec 1, 2022, 10:02 AM IST

ಮಂಗಳೂರು: ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ್ದ ಕುಖ್ಯಾತ ಅಂತಾರಾಜ್ಯ ಸಾಹೇಬ್ ಗಂಜ್ ದರೋಡೆ ಗ್ಯಾಂಗ್​ನ 9 ಮಂದಿಯನ್ನು ಸೆರೆ ಹಿಡಿಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಜರಾತ್​ನ ಭಾಸ್ಕರ ಬೆಳ್ಚಪಾಡ(65), ನೇಪಾಳದ ದಿನೇಶ್ ರಾವಲ್ ಯಾನೆ ಸಾಗರ್ ಯಾನೆ ದಿಲ್ಲಿ(38)‌ ಬಿಸ್ತ ರೂಪ್ ಸಿಂಗ್ (34), ಕೃಷ್ಣ ಬಹದ್ದೂರ್ ಬೋಗಟಿ (41), ಜಾರ್ಖಂಡ್​ನ ಮೊಹಮ್ಮದ್ ಜಾಮೀಲ್ ಶೇಖ್(29), ಇಂಜಮಾಮ್ ಉಲ್ ಹಕ್(27), ಇಮ್ದದುಲ್ ರಝಾಕ್ ಶೇಖ್ (32), ಬಿವುಲ್ ಶೇಖ್ (31), ಇಮ್ರಾನ್ ಶೇಖ್ (30) ಬಂಧಿತ ದರೋಡೆಕೋರರು.

Arrested accused
ಬಂಧಿತ ಆರೋಪಿಗಳು

ಮಂಗಳೂರು ನಗರದ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತ ಮೂಲದ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ವಾಸವಿತ್ತು. ಈ ಗ್ಯಾಂಗ್​ ತೊಕ್ಕೊಟ್ಟಿನ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸ್ ಇನ್​ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜ್ಯುವೆಲ್ಲರಿ ದರೋಡೆಗೆ ಸ್ಕೆಚ್​: ಗ್ಯಾಂಗ್​ನ ಸದಸ್ಯರು ತೊಕ್ಕೊಟ್ಟಿನ ಸೂಪರ್ ಗೋಲ್ಡ್​ ಆ್ಯಂಡ್​ ಡೈಮಂಡ್ಸ್​ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದರು. ಬಳಿಕ ತೊಕ್ಕೊಟ್ಟು ಬಳಿಯ ಲಾಡ್ಜ್ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದು ಅಲ್ಲಿ ದರೋಡೆಗೆ ಸಂಚು ರೂಪಿಸಿದ್ದರು. ಈ ಗ್ಯಾಂಗ್​ನಲ್ಲಿ ನೇಪಾಳದ ಆರೋಪಿಗಳು ಇದ್ದು, ದರೋಡೆ ನಂತರ ಕದ್ದ ವಸ್ತುಗಳೊಂದಿಗೆ ಇವರು ನೇಪಾಳಕ್ಕೆ ಪರಾರಿಯಾಗುತ್ತಿದ್ದರು.

ಇದನ್ನೂ ಓದಿ: ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ: ಕೇರಳದ ಆರೋಪಿಗಳು ವಶಕ್ಕೆ

ಜ್ಯುವೆಲ್ಲರಿ ಗುರುತಿಸಿಕೊಂಡು ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಆಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಆ್ಯಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂ ಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಇದರ ಒಟ್ಟು ಮೌಲ್ಯ ರೂ. 2,90,000 ಆಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

seized items
ವಶಪಡಿಸಿಕೊಂಡ ವಸ್ತುಗಳು

ದ್ವಿಚಕ್ರ ವಾಹನ ದರೋಡೆ ಪ್ರಕರಣ ದಾಖಲು: ಇತ್ತೀಚೆಗೆ ಮಂಗಳೂರು ನಗರದ ಹೊರವಲಯದ ನಾಟೆಕಲ್, ಆಂಬಿಕಾ ರೋಡ್, ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಅವರಿಂದ ಸ್ಕೂಟರ್​ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ ಪ್ರಕರಣ ದಾಖಲಾಗಿತ್ತು. ಸಾಹೇಜ್ ಗಂಜ್ ದರೋಡೆ ಗ್ಯಾಂಗ್​ ಆರೋಪಿಗಳು ಜ್ಯುವೆಲ್ಲರಿ ದರೋಡೆಗಾಗಿ ಸ್ಕೂಟರ್ ಸುಲಿಗೆ ಮಾಡಿದ್ದರು. ಈ ಮೂರು ಸ್ಕೂಟರ್​ಗಳನ್ನು ಕೂಡಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಭಾಸ್ಕರ ಬೆಳ್ಚಡ, ದಿನೇಶ್ ರಾವಲ್, ಇಂಜಮಾಮ್ ಉಲ್ ಹಕ್, ಬಿಸ್ತ ರೂಪ್ ಸಿಂಗ್, ಕೃಷ್ಣ ಬಹದ್ದೂರ್ ಬೋಗಟಿ ಎಂಬವರ ವಿರುದ್ಧ ಮುಂಬೈ, ಪುಣೆ, ಸೂರತ್, ಮಧ್ಯಪ್ರದೇಶದ ಮಾಧವ ನಗರ, ಕೇರಳದ ತ್ರಿಶೂರ್, ಪಂಜಾಬ್ ರಾಜ್ಯಗಳಲ್ಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬ್ಯಾಂಕ್ ದರೋಡೆ, ಜ್ಯುವೆಲ್ಲರಿ ದರೋಡೆ ಪ್ರಕರಣಗಳು ದಾಖಲಾಗಿದೆ. ಈ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್​ನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ., ಪ್ರದೀಪ ಟಿ. ಆರ್., ಎಎಸ್ಐಗಳಾದ ಶಶಿಧರ ಶೆಟ್ಟಿ, ಮೋಹನ್ ಕೆ.ವಿ, ಹರೀಶ ಪಿ. ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಆನೇಕಲ್ ಪೊಲೀಸರ ಭರ್ಜರಿ ಬೇಟೆ.. ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.