ETV Bharat / state

ಎಲ್ಲಾ ಕಚೇರಿಗಳಲ್ಲಿ ಸಕಾಲ ಬೋರ್ಡ್ ಕಡ್ಡಾಯ: ಅಪರ ಜಿಲ್ಲಾಧಿಕಾರಿ ರೂಪಾ ಸೂಚನೆ - ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಮ್.ಜೆ.ರೂಪಾ

ಸಕಾಲ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಸೂಚನೆಗಳು ಇರುವ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಸೂಚಿಸಿದ್ದಾರೆ.

Dakshina Kannada District Superintendent M.J.Rupa
ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಮ್.ಜೆ.ರೂಪಾ
author img

By

Published : Feb 3, 2020, 10:12 PM IST

ಮಂಗಳೂರು: ಸಕಾಲ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಸೂಚನೆಗಳು ಇರುವ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಸೂಚಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಕಾಲದ ಸಮರ್ಪಕವಾದ ಅನುಷ್ಠಾನವನ್ನು ಪರಿಶೀಲಿಸಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಕಾಲ ಅನುಷ್ಠಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಈಗಾಗಲೇ ಕಡಿಮೆ ಸ್ಥಾನ ಪಡೆದುಕೊಂಡಿದೆ. ಅಧಿಕಾರಿಗಳು ಈ ಸಕಾಲ ಯೋಜನೆಯಡಿಯಲ್ಲಿ ಬರುವ ಎಲ್ಲಾ ಸೇವೆಗಳನ್ನು ಸಾರ್ವಜನಿರಿಗೆ ನೀಡಬೇಕು. ಈ ಸೇವೆಯನ್ನು ನೀಡಲು ನಿರಾಕರಿಸಿದರೆ ಅವರ ವಿರುದ್ಧ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಸಮರ್ಪಕವಾಗಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಎಲ್ಲಾ ಅಧಿಕಾರಿ ವರ್ಗವೂ ಈ ಕಾಯ್ದೆಯ ಸಂಪೂರ್ಣವಾದ ಮಾಹಿತಿಯನ್ನು ಹೊಂದಿರಬೇಕು. ಸಕಾಲ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಅವರಿಗೆ ಸೇವೆಯನ್ನು ನೀಡುವುದು ಸಂಬಂಧಿಸಿದ ಅಧಿಕಾರಿಯ ಜವಾಬ್ದಾರಿವಾಗಿರುತ್ತದೆ ಎಂದು ಹೇಳಿದರು.

ಎಲ್ಲಾ ಇಲಾಖೆಗಳು ಸಕಾಲ ಯೋಜನೆಯ ಅಡಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಬೇಕು. ಹಾಗೆಯೇ ನಿಗದಿತ ಸಮಯದಲ್ಲಿ ಸಾರ್ವಜನಿಕ ಸೇವೆಯನ್ನು ನೀಡಬೇಕೆಂದು ಸೂಚಿಸಿದರು. ಮುಂದಿನ ದಿನಗಳಲ್ಲಿ ಮಾದರಿ ಜಿಲ್ಲೆಯಾಗಿ ರೂಪುಗೊಳ್ಳಬೇಕು. ಆದ್ದರಿಂದ ನಾವು ಈ ಹಿಂದೆ ಮಾಡಿದ ತಪ್ಪನ್ನು ಮತ್ತೊಮ್ಮೆ ಮಾಡದೇ ಉತ್ತಮ ಸೇವೆ ಸಲ್ಲಿಸಬೇಕು ಎಂದು ಎಂ. ಜೆ. ರೂಪಾ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.