ಸುಳ್ಯ: ಜನವರಿ 26ರಂದು ದೆಹಲಿಯಲ್ಲಿ ನಡೆಯವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಸಾನಿಧ್ಯ ಸುಳ್ಳಿ ಆಯ್ಕೆಯಾಗಿದ್ದಾರೆ.
ಮೈಸೂರು ತೋಟಗಾರಿಕಾ ಮಹಾವಿದ್ಯಾಲಯದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯಾಗಿರುವ ಸಾನಿಧ್ಯ ಎನ್.ಎಸ್.ಎಸ್ ಸ್ವಯಂಸೇವಕಿಯಾಗಿದ್ದು, ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಉತ್ತಮ ಕ್ರೀಡಾಪಟುವೂ ಆಗಿರುವ ಸಾನಿಧ್ಯ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ಸುಳ್ಳಿ ಜಯಪ್ರಸಾದ್ ಹಾಗೂ ಮೋಹಿನಿ ದಂಪತಿಯ ಪುತ್ರಿ. ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿಯೂ ಆಗಿರುವ ಇವರು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲಿದ್ದಾರೆ.