ETV Bharat / state

ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಮುನ್ನಾದಿನ ಬಂಟ್ವಾಳದಲ್ಲಿ ಶ್ರೀರಾಮಭಕ್ತರಿಂದ ಸತ್ಯನಾರಾಯಣ ಪೂಜೆ - ನೇತ್ರಾವತಿ ನದಿ

ಅಯೋಧ್ಯೆಯಲ್ಲಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂದರ್ಭ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಶ್ರೀರಾಮ ಭಕ್ತ ಬಂಟ್ವಾಳದ ಗೋವಿಂದ ಪ್ರಭು ಅವರು ನೇತ್ರಾವತಿ ನದಿ ನೀರಿನ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

Netravati River, Bantwal
ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಸಿದ್ಧತೆ
author img

By ETV Bharat Karnataka Team

Published : Jan 18, 2024, 9:16 PM IST

ಬಂಟ್ವಾಳ(ದಕ್ಷಿಣ ಕನ್ನಡ):ಅಯೋಧ್ಯೆಯಲ್ಲಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ಇದರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ಮಧ್ಯೆ 21ರಂದು ರಾತ್ರಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಲು ರಾಮಭಕ್ತರೊಬ್ಬರು ಸಿದ್ಧತೆ ಮಾಡಿಕೊಂಡಿದ್ದಾರೆ.

ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಹಾಗೂ ಅಯೋಧ್ಯೆ ಕರಸೇವೆಯಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಎ.ಗೋವಿಂದ ಪ್ರಭು ಅವರು ಈ ತಯಾರಿ ನಡೆಸುತ್ತಿರುವರು. ಪ್ರಸ್ತುತ ಅಯೋಧ್ಯೆ ನೂತನ ಮಂದಿರದಲ್ಲಿ ಜ. 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಸಂದರ್ಭ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬಂಟ್ವಾಳದ ಗೋವಿಂದ ಪ್ರಭು ನೇತ್ರಾವತಿ ನದಿಯ ನೀರಿನ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ಮಾಡಲು ಸಿದ್ಧತೆಯಲ್ಲಿ ತೊಡಗಿದ್ದಾರೆ.

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಜ.21ರ ರಾತ್ರಿ 7ರ ಬಳಿಕ ಈ ಪೂಜಾ ವಿಧಿಗಳು ನಡೆಯಲಿವೆ. ನದಿಯ ನೀರಿನ ಮಧ್ಯೆ ತೆಪ್ಪದ ಮಾದರಿ ರಚಿಸಿ ದೀಪಾರಾಧನೆಯ ಬೆಳಕಿನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ. ಬಂಟ್ವಾಳ ಪುರಸಭಾ ಸದಸ್ಯ ಹಾಗೂ ಶ್ರೀರಾಮ ಭಕ್ತ ಎ.ಗೋವಿಂದ ಪ್ರಭು ನೇತೃತ್ವ ವಹಿಸಿದ್ದು, ತಮ್ಮ ಖರ್ಚಿನಲ್ಲಿ ಈ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಶ್ರೀರಾಮನ ವಿಗ್ರಹ ಆಕರ್ಷಣೆ:ಜ. 22ರಂದು ದೇವಸ್ಥಾನದಲ್ಲೇ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಹೀಗಾಗಿ ಅದರ ಮುಂಚಿನ ರಾತ್ರಿ ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಪೂಜೆ ನಡೆಯುವ ಪಕ್ಕದ ನದಿಯಲ್ಲಿ ಶ್ರೀ ರಾಮನ ವಿಗ್ರಹ, ಆಂಜನೇಯನ ವಿಗ್ರಹಗಳು ಕೂಡ ಆಕರ್ಷಕವಾಗಿ ನಿರ್ಮಾಣಗೊಳ್ಳಲಿವೆ.

ಎರಡು ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ: ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಅವರಿಗಾಗಿ ದೇವಸ್ಥಾನ ಆವರಣದಲ್ಲಿ ನದಿ ಕಿನಾರೆಯ ಮೆಟ್ಟಿಲುಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇರುತ್ತದೆ. ಪೂಜೆಯ ಬಳಿಕ ಎಲ್ಲರೂ ನದಿಯ ಮಧ್ಯೆ ಪೂಜೆ ನಡೆಯುವ ಜಾಗಕ್ಕೆ ಬಂದು ಪ್ರಸಾದ ತೆಗೆದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.

ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ನೇತ್ರಾವತಿ ನದಿಯಲ್ಲಿ ತುಂಬೆ ಡ್ಯಾಮ್​​ದ ಹಿನ್ನೀರು ಹೆಚ್ಚಿನ ಪ್ರಮಾಣದಲ್ಲಿ ಇದ್ದು, ವಿದ್ಯುತ್ ದೀಪದ ಬೆಳಕಿನ ಜತೆಗೆ ಹಣತೆಯ ಬೆಳಕು ಕೂಡ ಗಮನ ಸೆಳೆಯಲಿವೆ. ಈಗಾಗಲೇ ನದಿಯ ಮಧ್ಯೆ ಸ್ಟೇಜ್ ರೀತಿಯ ಮಾದರಿ ರಚನೆಗೊಂಡಿದ್ದು, ಉಳಿದಂತೆ ಎಲ್ಲಾ ಸಿದ್ಧತೆಗಳು ಆಗುತ್ತಿವೆ ಎಂದು ಮಾಧ್ಯಮದವರಿಗೆ ರಾಮಭಕ್ತರು ಮಾಹಿತಿ ನೀಡಿದ್ದಾರೆ.

ಇದನ್ನೂಓದಿ:ಹುಬ್ಬಳ್ಳಿ : ಅಯೋಧ್ಯೆಗೆ ಬೈಕ್ ಸವಾರಿ ಹೊರಟ ಯುವಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.