ಮಂಗಳೂರು: ಇಲ್ಲಿನ ಹೊರವಲಯದ ಗುರುಪುರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿರುವುದು ಗೊಂದಲ ಸೃಷ್ಟಿಸಿತು. ಗುರುಪುರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಘಟನೆ ನಡೆದಿದೆ.
ಗುರುಪುರದ ಬೆಥಣಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ್ದರು. ಮಕ್ಕಳು ಭಾರತಾಂಬೆಯ ಭಾವಚಿತ್ರದೊಳಗೆ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಳಸಿದ್ದು, ಅದರಲ್ಲಿ ಸಾವರ್ಕರ್ ಅವರ ಫೋಟೋ ಕೂಡಾ ಇತ್ತು.
ಇದಕ್ಕೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಡಿಪಿಐ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಶಿಕ್ಷಣ ಸಂಸ್ಥೆಯಿಂದ ಕ್ಷಮಾಪಣೆ ಕೇಳಿಸಿದ್ದಾರೆ. ಈ ವಿಚಾರ ಕಾರ್ಯಕ್ರಮ ಮುಗಿದ ಬಳಿಕ ಹಿಂದೂ ಸಂಘಟನೆಗಳ ಕಾರ್ಯಕರ್ತರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಬಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಎಸ್ಡಿಪಿಐ ಆಕ್ಷೇಪದ ಬಳಿಕ ಸುರತ್ಕಲ್ ಜಂಕ್ಷನ್‌ನಲ್ಲಿದ್ದ ಸಾವರ್ಕರ್ ಫೋಟೋ ತೆರವು