ETV Bharat / state

ಭಾರಿ ಮಳೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ - ನೋಡಲ್ ಅಧಿಕಾರಿಗಳು

ಅಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ಕನ್ನಡದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ಡಿಸಿ ಮಲ್ಲೈ ಮುಗಿಲನ್ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ
ದಕ್ಷಿಣ ಕನ್ನಡ
author img

By

Published : Jul 25, 2023, 9:12 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ನಾಳೆ ( ಜು. 26 ) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಗ್ರಾಮೀಣ ಮತ್ತು ದೂರ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನೂಕೂಲವಾಗುವ ಸಂದರ್ಭದಲ್ಲಿ ಆನ್​ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶ ಕಲ್ಪಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

ಇದನ್ನೂ ಓದಿ: Heavy rain in Coastal Karnataka: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ; ಶಾಲಾ-ಕಾಲೇಜಿಗೆ ರಜೆ, ಪದವಿ ಪರೀಕ್ಷೆಗಳು ಮುಂದೂಡಿಕೆ

ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077, 0824-2442590 ದೂರವಾಣಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಬೆಳಗಾವಿಯಲ್ಲಿ ಮಳೆ ಅವಾಂತರ : ಇಲ್ಲಿನ ನಗರದ ವಡಗಾವಿ ಸಫಾರ ಗಲ್ಲಿಯಲ್ಲಿ ಮಳೆಯು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ, ವಿದ್ಯುತ್ ಮಗ್ಗದ ಕಾರ್ಖಾನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಫಾರ ಗಲ್ಲಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ನೀರು ನುಗ್ಗುತ್ತಿದೆ. ಹಗಲು ರಾತ್ರಿ ಎನ್ನದೇ ಇಲ್ಲಿನ ಜನ, ಚಿಕ್ಕ ಮಕ್ಕಳು, ವಯೋವೃದ್ಧರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಮೊಣಕಾಲುದ್ದ ನಿಂತಿದ್ದ ನೀರನ್ನು ಹೊರ ಹಾಕುವಲ್ಲಿ ಜನರು ನಿರಂತರ ಶ್ರಮಪಡಬೇಕಿದೆ.

ಇನ್ನು ಮನೆಗಳಿಗೆ ಅಷ್ಟೇ ಅಲ್ಲದೇ ಇಲ್ಲಿನ ನಾರಾಯಣ ಚಿಲ್ಲಾಳ, ಮಹಾದೇವ ಸುತಾರ ಅವರ ವಿದ್ಯುತ್ ಮಗ್ಗದ ಕಾರ್ಖಾನೆಗಳಿಗೂ ನೀರು ನುಗ್ಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಅಲ್ಲದೇ ಮಳೆ ನೀರಿನ ಜೊತೆಗೆ ಚರಂಡಿಯಲ್ಲಿನ ಕೊಳಚೆ ನೀರು ಕೂಡ ಹರಿದು ಬರುತ್ತಿರುವುದರಿಂದ ಜನರಿಗೆ ರೋಗ ರುಜಿನಗಳ ಭೀತಿಯೂ ಕಾಡುತ್ತಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮನೆ ಕುಸಿತ, ಕಾರ್​ಗಳು ಜಖಂ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.