ಮಂಗಳೂರು: ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ನಗರದ ಜಪ್ಪಿನಮೊಗರುವಿನ ನಿವಾಸಿಗಳಾದ ಗಂಗಾಧರ ಮತ್ತು ನೇತ್ರಾವತಿ ಮೃತರು. ಇವರ ಮಗಳು ಮೋಕ್ಷ ( 4) ಮತ್ತು ನೇತ್ರಾವತಿಯ ಅಕ್ಕನ ಮಗ ಜ್ಞಾನೇಶ್ (6) ಗಾಯಗೊಂಡಿದ್ದಾರೆ.
ಗಂಗಾಧರ ಅವರು ನೇತ್ರಾವತಿ ಮತ್ತು ಇಬ್ಬರು ಮಕ್ಕಳನ್ನು ಸ್ಕೂಟರ್ನಲ್ಲಿ ಕರೆದುಕೊಂಡು ಪಂಪ್ವೆಲ್ನಿಂದ ತೊಕ್ಕೊಟ್ಟು ಕಡೆಗೆ ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಎದುರು ಕಲ್ಲಾಪು ಮಾರ್ಕೆಟ್ನಿಂದ ಬಂದ ಲಾರಿ ಗುದ್ದಿದೆ.
ಸ್ಕೂಟರ್ನಲ್ಲಿದ್ದ ನಾಲ್ವರೂ ರಸ್ತೆಗೆ ಬಿದ್ದಿದ್ದಾರೆ. ಗಂಗಾಧರ್ ಹಾಗೂ ನೇತ್ರಾವತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮಕ್ಕಳಾದ ಜ್ಞಾನೇಶ್ ಹಾಗೂ ಮೋಕ್ಷಾ ಕೂಡ ಗಾಯಗೊಂಡಿದ್ದು, ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕ ಹನೀಫ್ ಎಂಬಾತನ ವಿರುದ್ಧ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಲಾರಿ ಚಲಾಯಿಸಿದ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಕಾರು-ಬಸ್ ನಡುವೆ ಭೀಕರ ರಸ್ತೆ ಅಪಘಾತ: 11 ಮಂದಿ ದುರ್ಮರಣ