ಪುತ್ತೂರು: ಕಬಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಪ್ರಸಂಗ ನಡೆಯಿತು.
ಗ್ರಾ.ಪಂ ರಥಕ್ಕೆ ಕಬಕ ಗ್ರಾಮ ಪಂಚಾಯಿತಿ ವಠಾರದಲ್ಲಿ ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಬಳಿಕ ಸ್ವಾತಂತ್ರ್ಯ ರಥಕ್ಕೆ ತಡೆ ಉಂಟು ಮಾಡಿದರು.
ಈ ವೇಳೆ ಪರಸ್ಪರ ವಾಗ್ವಾದ ನಡೆಯಿತು. ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ಸಮಾಧಾನ ಮಾಡಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿಯಿತು.
ಪುತ್ತೂರು ನಗರ ಠಾಣಾ ಇನ್ಸ್ಪೆಕ್ಟರ್ ಗೋಪಾಲ ನಾಯ್ಕ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಿತು.