ETV Bharat / state

ಸಚಿವ ಈಶ್ವರಪ್ಪ, ಶಾಸಕ ಹರೀಶ್ ಪೂಂಜಾ ವಿರುದ್ಧ ಎಸ್​​ಡಿಪಿಐ ದೂರು - ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಮತ್ತು ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಎಸ್​​ಡಿಪಿಐ ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ

SDPI Complaint against Minister Ishwarappa and MLA Harish Poonja
ಸಚಿವ ಈಶ್ವರಪ್ಪ, ಶಾಸಕ ಹರೀಶ್ ಪೂಂಜಾ ವಿರುದ್ಧ ಎಸ್​​ಡಿಪಿಐ ದೂರು
author img

By

Published : Feb 11, 2021, 3:58 PM IST

ಬಂಟ್ವಾಳ: ಬೆಳ್ತಂಗಡಿಯಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್​.ಈಶ್ವರಪ್ಪ ಮತ್ತು ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿರುವ ಎಸ್​​ಡಿಪಿಐ ಈ ಕುರಿತು ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ.

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಸಚಿವ ಈಶ್ವರಪ್ಪ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ಟಾಳ ನಗರ ಠಾಣಾಧಿಕಾರಿಗಳಿಗೆ ಭಾಷಣದ ವಿಡಿಯೋ ಸಿಡಿ ಲಗತ್ತಿಸಲ್ಪಟ್ಟ ದಾಖಲೆಗಳೊಂದಿಗೆ ಎಸ್​ಡಿಪಿಐ ಬಂಟ್ಟಾಳ ಕ್ಷೇತ್ರ ಸಮಿತಿ ಸದಸ್ಯ ಮೂನೀಶ್ ಆಲಿ ದೂರು ನೀಡಿದರು.

ಈ ಸಂದರ್ಭ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್​.ಹೆಚ್, ಕ್ಷೇತ್ರ ಅಧ್ಯಕ್ಷ ಯೂಸುಫ್ ಆಲಡ್ಕ, ಕ್ಷೇತ್ರ ಕಾರ್ಯದರ್ಶಿ ಸಲೀಂ ಆಲಾಡಿ ಮತ್ತು ಮಲಿಕ್ ಕೊಲಕೆ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.