ಮಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಅಬ್ದುಲ್ ಅಜೀಮ್ ಅವರು ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ನಿಯೋಗ ಅವರನ್ನು ಭೇಟಿಯಾಗಿ ಎಸ್ಡಿಪಿಐ ಕಾರ್ಯಕರ್ತರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ. ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಅಹವಾಲು ಸಲ್ಲಿಸಿತು.
ಅಲ್ಲದೆ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿರುವ ನೈಜ ಆರೋಪಿಗಳಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು. ಸುಳ್ಳು ಮೊಕದ್ದಮೆ ದಾಖಲಿಸಿ ಅಮಾಯಕ ಯುವಕರನ್ನು ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ನಿಯೋಗ ಒತ್ತಾಯಿಸಿತು.