ಬಂಟ್ವಾಳ: ಪಿಂಚಣಿದಾರರಿಗೆ ಸಂಬಂಧಿಸಿದ ಸಮಸ್ಯೆಯನ್ನು ಸರ್ಕಾರ ತಕ್ಷಣ ಬಗೆಹರಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ರಾಜ್ಯದಲ್ಲಿ ವೃದ್ಧಾಪ್ಯ, ವಿಕಲಚೇತನ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷಾ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತ್ತಿರುವ ಪಿಂಚಣಿದಾರರಿಗೆ ಕಳೆದ ಎಂಟು ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲ. ಈ ಕಾರಣದಿಂದಾಗಿ ಪಿಂಚಣಿದಾರರ ಜೀವನಕ್ಕೆ ತೊಂದರೆಯಾಗಿದೆ ಎಂದು ಹೇಳಿದರು.
ಈ ವೇಳೆ ಎಸ್ ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯ ಮೊಹಮ್ಮದ್ ಕಡಂಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಹೆಚ್., ಬಂಟ್ವಾಳ ಕ್ಷೇತ್ರ ಉಪಾಧ್ಯಕ್ಷ ಉಬೈದ್ ಬಂಟ್ವಾಳ, ಕ್ಷೇತ್ರ ಕಾರ್ಯದರ್ಶಿಗಳಾದ ಖಲಂದರ್ ಪರ್ತಿಪಾಡಿ, ಸಲೀಂ ಅಲಾಡಿ ಮಲಿಕ್ ಕೊಳಕೆ ಉಪಸ್ಥಿತರಿದ್ದರು.