ETV Bharat / state

ಪಾಕ್ ಪರ ಘೋಷಣೆ ಪ್ರಕರಣ: ಬೆಳ್ತಂಗಡಿಯಲ್ಲಿ ಎಸ್‌ಡಿಪಿಐಯಿಂದ ಪ್ರತಿಭಟನೆ - Dakshina kannada district news

ಪಾಕ್ ಪರ ಘೋಷಣೆ ಕೂಗಿದ್ದ ವಿಚಾರವಾಗಿ ಬಂಧಿಸಿದ ಎಸ್‌ಡಿಪಿಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಎಸ್​ಡಿಪಿಐ ಕಾರ್ಯಕರ್ತರು ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಿದರು.

SDPI protest in Beltangadi
ಬೆಳ್ತಂಗಡಿಯಲ್ಲಿ ಎಸ್‌ಡಿಪಿಐಯಿಂದ ಪ್ರತಿಭಟನೆ
author img

By

Published : Jan 6, 2021, 10:52 PM IST

ಬೆಳ್ತಂಗಡಿ: ಉಜಿರೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರವಾಗಿ ಬಂಧಿಸಿದ ಎಸ್‌ಡಿಪಿಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು. ನೀಡಿದ ದೂರಿನನ್ವಯ ಹಿಂದೂ ಸಂಘಟನೆ ಕಾರ್ಯಕರ್ತನನ್ನು ಬಂಧಿಸುವಂತೆ ಒತ್ತಾಯಿಸಿ ಎಸ್​ಡಿಪಿಐ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಪೊಲೀಸ್ ಠಾಣೆ ಸಮೀಪ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ...ತುಳುವನ್ನು ರಾಜ್ಯಭಾಷೆಯಾಗಿ ಅಂಗೀಕರಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ : ಸಿಎಂ ಭರವಸೆ

ಠಾಣೆಗೆ ಮುತ್ತಿಗೆ ಹಾಕಲು ಬರುತ್ತಿದ್ದ ಪ್ರತಿಭಟನಾಕಾರರನ್ನು ಠಾಣೆಯ ಗೇಟಿನ ಎದುರೇ ಪೊಲೀಸರು ತಡೆದರು. ಮಿನಿ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ ಘೋಷಣೆಯನ್ನು ಕೂಗಿದರು. ಪ್ರತಿಭಟನೆ ಕುರಿತು ಮೊದಲೇ ಮಾಹಿತಿಯಿದ್ದ ಕಾರಣ ಬಂದೋಬಸ್ತ್​​​ ಮಾಡಿಕೊಳ್ಳಲಾಗಿತ್ತು.

ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸಾ ಪ್ರಾಂಕೋ, ತಾಲೂಕು ಅಧ್ಯಕ್ಷ ಹೈದರ್ ನೀರ್ಸಾಲ್ ಮಾತನಾಡಿ, ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸದೆ, ರಾಜಕೀಯಕ್ಕೆ ಒತ್ತಡದಿಂದ ಅಮಾಯಕರನ್ನು ಬಂಧಿಸಲಾಗಿದೆ ಎಂದರು. ಮೇಲಾಧಿಕಾರಿಗಳು ಬರುವವವರೆಗೂ ನಾವು ಪ್ರತಿಭಟನಾ ಸ್ಥಳ ಕದಲುವುದಿಲ್ಲ ಎಂದು ಕಾರ್ಯಕರ್ತರು ಪಟ್ಟುಹಿಡಿದರು. ಆರ್‌ಎಸ್‌ಎಸ್, ಹಿಂದೂ ಸಂಘಟನೆಗಳು ವಿರುದ್ಧ ಘೋಷಣೆ ಕೂಗಿದರು.

ಬೆಳ್ತಂಗಡಿಯಲ್ಲಿ ಎಸ್‌ಡಿಪಿಐಯಿಂದ ಪ್ರತಿಭಟನೆ

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಬಂದ ಬಂಟ್ವಾಳ ಡಿವೈಎಸ್ಪಿ ವೆಲೈಂಟೈನ್ ಡಿಸೋಜಾ ಅವರು ಪ್ರತಿಭಟನಾಕಾರ ಮನವೊಲಿಸಿ ಸಂಘಟನೆ ಮುಖಂಡರ ಜೊತೆ ಮಾತುಕತೆ ನಡೆಸಿದರು. ಜ.11ರೊಳಗೆ ಸ್ಪಷ್ಟ ನಿಲುವು ನೀಡಬೇಕು. ಇಲ್ಲವಾದಲ್ಲಿ ಬೃಹತ್ ಧರಣಿ ನಡೆಸಲಾಗುತ್ತದೆ ಎಂದು ಗಡುವು ನೀಡಿದರು. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿವೈಎಸ್ಪಿ ಭರವಸೆ ನೀಡಿದರು. ನಂತರ ಪ್ರತಿಭಟನೆ ವಾಪಸ್​ ಪಡೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.