ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜಲಡ್ಕ ಬಳಿ ಹೊಳೆಯ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಲಾಗುತ್ತಿದ್ದು, ಇನ್ನೂ ವ್ಯಕ್ತಿಯ ಸುಳಿವು ಸಿಕ್ಕಿಲ್ಲ.
ಅಜಲಡ್ಕದ ಪಕೀರ ನಾಯ್ಕ್ ಎಂಬವರು ಭಾರಿ ಮಳೆಯ ಸಂದರ್ಭದಲ್ಲಿ ಹೊಳೆಯಲ್ಲಿ ತೆಂಗಿನಕಾಯಿ ಹಿಡಿಯುವಾಗ ಕೊಚ್ಚಿಹೋಗಿದ್ದರು. ಕಳೆದ ಮೂರು ದಿನಗಳಿಂದ ವ್ಯಕ್ತಿಯ ಹುಡುಕಾಟ ನಡೆಸಲಾಗುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ.
ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.