ETV Bharat / state

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದಲ್ಲೂ ವಿದ್ಯಾರ್ಥಿನಿಯರದ್ದೇ ಮೇಲುಗೈ - Secondary PUC result managalore topper

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

Secondary PUC result managalore topper
ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ
author img

By

Published : Jul 14, 2020, 3:51 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಅತ್ಯಧಿಕ ಅಂಕ ಪಡೆದಿದ್ದಾರೆ.

ಮಂಗಳೂರಿನ ವಿಕಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಪೂರ್ವ ಜಿಲ್ಲೆಗೆ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಅವರು, ದ.ಕ. ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಇಂಗ್ಲಿಷ್​​ನಲ್ಲಿ 95 ಅಂಕ, ಹಿಂದಿಯಲ್ಲಿ 99 ಅಂಕ ಪಡೆದರೆ, ಬ್ಯುಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಸ್ಟಾಟಿಸ್ಟಿಕ್ ಹಾಗೂ ಬೇಸಿಕ್ ಮ್ಯಾಥ್ಸ್​​ನಲ್ಲಿ ತಲಾ 100 ಅಂಕ ಪಡೆದಿದ್ದಾರೆ. ಅವರು ಒಟ್ಟು 594 ಅಂಕಗಳನ್ನು ಗಳಿಸಿದ್ದಾರೆ.

ಮಂಗಳೂರಿನ ಬಾಸ್ಕೋಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ, ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 5 ನೇ ಸ್ಥಾನ ಪಡೆದುಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇಂಗ್ಲಿಷ್​​​ನಲ್ಲಿ 93, ಬಯೋಲಜಿಯಲ್ಲಿ 99 ಮತ್ತು ಸಂಸ್ಕೃತ, ಭೌತಶಾಸ್ತ್ರ, ಕೆಮಿಸ್ಟ್ರಿ ಹಾಗೂ ಮ್ಯಾಥ್ಸ್​​ನಲ್ಲಿ ತಲಾ 100 ಅಂಕ ಸಿಕ್ಕಿದ್ದು, ಒಟ್ಟು 592 ಅಂಕಗಳನ್ನು ಗಳಿಸಿ, ಉತ್ತಮ ಸಾಧನೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.