ಮಂಗಳೂರು: ಇಲ್ಲಿನ ಖಾಸಗಿ ಕಾಲೇಜೊಂದರ ದ್ವಿತೀಯ ಪಿಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳೂರಿನ ಉಳ್ಳಾಲ ಮಾಸ್ತಿಕಟ್ಟೆಯಲ್ಲಿಈ ಘಟನೆ ಜರುಗಿದ್ದು, ಪ್ರತೀಕ್ (18 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ತರಗತಿಗೆ ರಜೆ ಎಂದು ಪ್ರತೀಕ್ ಮನೆಯಲ್ಲಿಯೇ ಉಳಿದುಕೊಂಡಿದ್ದ ಎನ್ನಲಾಗಿದೆ. ಈತನ ತಂದೆ ಕಮಲಾಕ್ಷ ಹಾಗೂ ತಾಯಿ ಪದ್ಮಾಕ್ಷಿ ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾಗಿದ್ದು, ಅವರು ಕೆಲಸಕ್ಕೆ ಹೋದ ನಂತರ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.