ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಸಾಮಾಜಿಕ ಜಾಲತಾಣದ ಕೋ ಆರ್ಡಿನೇಷನ್ ಸಮಿತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಲಾವಣ್ಯಾ ಬಲ್ಲಾಳ್ ಮತ್ತು ಶೇರಿಲ್ ಅಯೋನ ಆಯ್ಕೆಯಾಗಿದ್ದಾರೆ.
![Selected to the KPCC Social Network Coordination Committee](https://etvbharatimages.akamaized.net/etvbharat/prod-images/kn-mng-05-kpcc-social-media-script-ka10015_07052020183115_0705f_1588856475_361.jpg)
ಸಮಿತಿಗೆ ಹೆಚ್ಚುವರಿಯಾಗಿ 9 ಸದಸ್ಯರನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದು, ಈ ಮೂಲಕ ದ.ಕ. ಜಿಲ್ಲೆಯಿಂದ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.
ಲಾವಣ್ಯಾ ಬಲ್ಲಾಳ್, ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ಹಲವು ವರ್ಷಗಳಿಂದ ಮಹಿಳಾ ಕಾಂಗ್ರೆಸ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವಿದೆ. ಇನ್ನು ಶೇರಿಲ್ ಅಯೋನ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ರಾಜ್ಯ ಮಟ್ಟದ ಮಹಿಳಾ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ ಅನುಭವವಿದೆ.
![Selected to the KPCC Social Network Coordination Committee](https://etvbharatimages.akamaized.net/etvbharat/prod-images/kn-mng-05-kpcc-social-media-script-ka10015_07052020183115_0705f_1588856475_483.jpg)
ಇವರಿಬ್ಬರ ಕಾರ್ಯಕ್ಷಮತೆಯನ್ನು ಗುರುತಿಸಿ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.