ETV Bharat / state

ಹಿರಿಯ ಸಾಹಿತಿ ಅಮೃತ ಸೋಮೇಶ್ವರ ವಿಧಿವಶ - ಅಮೃತ ಸೋಮೇಶ್ವರ ಕೃತಿ

ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅಮೃತ ಸೋಮೇಶ್ವರ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

Amrita Someshwara
ಅಮೃತ ಸೋಮೇಶ್ವರ
author img

By ETV Bharat Karnataka Team

Published : Jan 6, 2024, 1:32 PM IST

Updated : Jan 6, 2024, 2:28 PM IST

ಮಂಗಳೂರು (ದಕ್ಷಿಣ ಕನ್ನಡ): ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ ಹಾಗೂ ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಹಿರಿಯ ಸಾಹಿತಿಗೆ 88 ವರ್ಷ ವಯಸ್ಸಾಗಿತ್ತು.

ಅಮೃತ ಸೋಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953ರ ಸೆಪ್ಟಂಬರ್ 27ರಂದು ಜನಿಸಿದ್ದರು. ಪ್ರಾರಂಭಿಕ ಶಿಕ್ಷಣವನ್ನು ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಪಡೆದ ಅವರು ಪ್ರೌಢ ಶಿಕ್ಷಣವನ್ನು ಆನಂದಾಶ್ರಮದಲ್ಲಿ ಮುಗಿಸಿದ್ದರು. ಆನಂತರ ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದ್ರಾಸ್​ ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ.

ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ ಪದವಿ ಪಡೆದರು. ಬಳಿಕ ಪುತ್ತೂರಿನ ಸೈಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದರು.

ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದ್ದರು. ಹೈಸ್ಕೂಲ್​ ವಿದ್ಯಾರ್ಥಿ ಆಗಿದ್ದಾಗಲೇ ಅವರಿಗೆ ಸಾಹಿತ್ಯದ ಮೇಲೆ ಒಲವಿತ್ತು. ಕಥೆ, ಕವನಗಳ ರಚನೆಯಲ್ಲಿ ತೊಡಗಿಸಿಕೊಂಡು ಯಕ್ಷಗಾನ ಪ್ರಸಂಗವನ್ನು ರಚಿಸಿದ್ದರು. ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಸೇರಿ 30ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ತಮಿಳಿನ ದಿವಂಗತ ನಟ ವಿಜಯ್​ಕಾಂತ್ ಮನೆಗೆ ಶಿವರಾಜ್ ಕುಮಾರ್ ಭೇಟಿ

ವಿದ್ಯಾರ್ಥಿ ಆಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ತುಳುನಾಡಿನ ಸಂಸ್ಕೃತಿ ಮತ್ತು ಕಲೆ ಬಗ್ಗೆ ವಿಶೇಷ ಒಲವುಳ್ಳವರಾಗಿದ್ದರು. 1957ರಲ್ಲಿ 'ಎಲೆಗಿಳಿ' ಎಂಬ ಅವರ ಮೊದಲ ಸಣ್ಣಕಥೆಗಳ ಸಂಕಲನ ಪ್ರಕಟವಾಯಿತು. ರುದ್ರಶಿಲೆ ಸಾಕ್ಷಿ, ಕೆಂಪು ನೆನಪು ಎಂಬ ಅವರ ಇನ್ನೆರಡು ಸಂಕಲನಗಳು ಪ್ರಕಟವಾದವು. ವನಮಾಲೆ, ಭ್ರಮಣ ಉಪ್ಪು ಗಾಳಿ ಮೊದಲಾದ ಕವನ ಸಂಕಲನ, ತೀರದ ತೆರೆ ಕಾದಂಬರಿ, ಯಕ್ಷಗಾನ ಕೃತಿ ಸಂಪುಟ, ತುಳು ಪಾಡ್ದನದ ಕಥೆಗಳು, ಅವಿಲು, ತುಳು ಬದುಕು, ಯಕ್ಷಗಾನ ಹೆಜ್ಜೆಗುರುತು, ಭಗವತಿ ಆರಾಧನೆ, ಮೋಯ-ಮಲೆಯಾಳ ನಿಘಂಟು ಮೊದಲಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ತುಳುವಿನಲ್ಲೂ ಬರೆಯಬಲ್ಲ ಅವರು ತಂಬಿಲ, ರಂಗಿತ ಕವನ ಸಂಗ್ರಹ, ಗೋಂದೋಲ್, ರಾಯ ರಾವುತೆ ಸೇರಿದಂತೆ ಮೊದಲಾದ ನಾಟಕಗಳನ್ನು ಪ್ರಕಟ ಮಾಡಿದ್ದರು. ಅಲ್ಲದೆ, ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯ ಒದಗಿಸಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಶಶಿ 'ಮೆಹಬೂಬಾ' ಸಿನಿಮಾಗೆ ಸಚಿವ ಚಲುವರಾಯಸ್ವಾಮಿ ಸಾಥ್

Last Updated : Jan 6, 2024, 2:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.