ETV Bharat / state

ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ

author img

By

Published : Sep 27, 2020, 2:56 PM IST

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

Tenkabileu Thirumaleshwara Shastri
Tenkabileu Thirumaleshwara Shastri

ಬಂಟ್ವಾಳ: ತನ್ನದೇ ಶೈಲಿಯ ಹಾಡುಗಾರಿಕೆ ಮೂಲಕ ಯಕ್ಷಗಾನ ಪ್ರಿಯರ ಮನ್ನಣೆ ಗಳಿಸಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಠಲ ಶಾಸ್ತ್ರಿ, ಸಂಪಾಜೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳಿಗೆ ಭಾಜನರಾಗಿರುವ ಅವರು ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು.

ಹವ್ಯಾಸಿ ಭಾಗವತರಾಗಿ ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ಭಾಗವಹಿಸಿರುವ ಇವರು, ಮೂಲತಃ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ತೆಂಕಬೈಲಿನವರು. 1944ರಲ್ಲಿ ಪ್ರಸಿದ್ಧ ಚಕ್ರಕೋಡಿ ಮನೆತನದ ತೆಂಕಬೈಲು ಕೃಷ್ಣ ಶಾಸ್ತ್ರಿ ಸಾವಿತ್ರಿಯಮ್ಮ ದಂಪತಿಯ ಪುತ್ರರಾಗಿ ಜನಿಸಿದ ತಿರುಮಲೇಶ್ವರ ಶಾಸ್ತ್ರಿಯವರು ಸಂಬಂಧಿಕರಾದ ರಾಮ ಭಟ್ಟ, ನಾರಾಯಣ ಭಟ್ಟರ ಪ್ರೋತ್ಸಾಹದಿಂದ ಹಿಮ್ಮೇಳ ಭಾಗವತಿಕೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು.

ಹವ್ಯಾಸಿ ಭಾಗವತರಾಗಿಯೇ ಜನಪ್ರಿಯರಾಗಿದ್ದ ಇವರು, ಅಗರಿ ಶೈಲಿಯಿಂದ ಪ್ರಭಾವಿತರಾಗಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಹಲವಾರು ಹವ್ಯಾಸಿ ಆಟ, ಕೂಟಗಳಿಗೆ ಭಾಗವತಿಕೆ ಮಾಡಿದ್ದಾರೆ. ಪೌರಾಣಿಕ ಪ್ರಸಂಗಗಳನ್ನು ಲೀಲಾಜಾಲವಾಗಿ ನಿರ್ವಹಿಸುತ್ತಿದ್ದ ಶಾಸ್ತ್ರೀ ಅವರು, ದಕ್ಷಾಧ್ವರ, ಕರ್ಣಪರ್ವ, ದೇವಿ ಮಹಾತ್ಮೆ, ಕೃಷ್ಣಲೀಲೆ-ಕಂಸವಧೆ, ಭಾರ್ಗವ ವಿಜಯ, ಕೃಷ್ಣಾರ್ಜುನ ಸಹಿತ ಹಲವು ಪ್ರಸಂಗಗಳಲ್ಲಿ ತೆಂಕಬೈಲು ಶೈಲಿಯನ್ನು ಪ್ರಸ್ತುತಪಡಿಸುತ್ತಿದ್ದರು.

ಮೃತರು ಮೂವರು ಪುತ್ರಿಯರು ಮತ್ತು ಓರ್ವ ಪುತ್ರ (ಹವ್ಯಾಸಿ ಭಾಗವತ ಮುರಳೀಕೃಷ್ಣ ಶಾಸ್ತ್ರಿ)ನನ್ನು ಹಾಗೂ ಅಪಾರ ಬಂಧು, ಬಳಗ, ಶಿಷ್ಯ ಹಾಗೂ ಅಭಿಮಾನಿ ವೃಂದವನ್ನು ಅಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.