ETV Bharat / state

ಕೊರೊನಾ ಹರಡದಂತೆ ತಡೆಯಲು ದ.ಕ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಎಲ್ಲಾ ಸೇವೆಗಳು ಸ್ಥಗಿತ! - ಕೊರೊನಾ ವೈರಸ್​ ಮುಂಜಾಗ್ರತೆ

ಕೊರೊನಾ ವೈರಸ್​ ದಿನದಿಂದ ದಿನಕ್ಕೆ ದೆಶದಲ್ಲಿ ವ್ಯಾಪಕವಾಗಿ ಹರಡುತ್ತಲೇ ಇದೆ. ಹಾಗಾಗಿ ರಾಜ್ಯದಲ್ಲೂ ವೈರಸ್​ ಹರಡುವಿಕೆ ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

sindhu rupesh
ಸಿಂಧೂ ರುಪೇಶ್​
author img

By

Published : Mar 17, 2020, 4:50 PM IST

ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಸೋಂಕು ಹರಡುವುದನ್ನು ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಉತ್ಸವ, ಸಾಮೂಹಿಕ ವಿವಾಹ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ‌ ಎಂದು ಜಿಲ್ಲಾಧಿಕಾರಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಗಾಗಿ ಜಿಲ್ಲೆಯಾದ್ಯಂತ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳಲ್ಲಿ ಕೇವಲ ದೇವಸ್ಥಾನಗಳ ಸಿಬ್ಬಂದಿ ಮಾತ್ರ ಭಾಗವಹಿಸಬೇಕು. ಅಲ್ಲದೆ ಈ ಉತ್ಸವಗಳಲ್ಲಿ ಸಾರ್ವಜನಿಕರು ಭಾಗವಹಿಸದಂತೆ ನಿರ್ಬಂಧ ಹೇರಲಾಗಿದೆ. ದೇವಸ್ಥಾನಗಳಲ್ಲಿ ಕೇವಲ ದರ್ಶನ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದು ಮಾಡಲಾಗಿದೆ. ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶವಿಲ್ಲ. ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಸಾರ್ವಜನಿಕರು ಗುಂಪು ಗುಂಪಾಗಿ ಪ್ರವೇಶ ಮಾಡುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

ಅಲ್ಲದೆ ಬೀಚ್ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಬೇಸಿಗೆ ಶಿಬಿರ, ವಿಚಾರ ಸಂಕಿರಣ, ಸಮಾರಂಭ ಮುಂತಾದವುಗಳಿಗೂ ನಿರ್ಬಂಧ ಹೇರಲಾಗಿದೆ. ಮದುವೆ ಸಮಾರಂಭಗಳನ್ನು ಆದಷ್ಟು ಸರಳವಾಗಿ ನಡೆಸಿ, ಜನಸಂದಣಿ ತಡೆಗಟ್ಟುವಂತೆ ಸೂಚಿಸಲಾಗಿದೆ. ಪಿಜಿ ಮತ್ತು ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ರಜೆ ಘೋಷಣೆ ಆಗಿದ್ದಲ್ಲಿ ತಕ್ಷಣ ಮನೆಗೆ ಹೋಗಬೇಕೆಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.