ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಕನ್ಯಾನ ಗ್ರಾಮದ ಸುರೇಶ್ ಪ್ರಭು (31) ಬಂಧಿತ ಆರೋಪಿ. ವಿಟ್ಲ ಠಾಣಾ ವ್ಯಾಪ್ತಿಯ ಶಾಲೆಯೊಂದರ 9 ನೇ ತರಗತಿಯ ಬಾಲಕನನ್ನು, ಸುರೇಶ್ ಪ್ರಭು ಶೌಚಾಲಯಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕ ಮನೆಗೆ ಬಂದ ಬಳಿಕ ಜ್ವರ ಬಂದಿದ್ದು, ಬಳಿಕ ವಿಚಾರಿಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ.
ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.