ETV Bharat / state

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ತಲಪಾಡಿ ಚೆಕ್ ಪೋಸ್ಟ್ ಬಳಿ ಜರುಗಿದೆ.

Sexual harassment for a student in ullal
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
author img

By

Published : Dec 1, 2021, 3:28 PM IST

ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಸ್ಕೂಟರಿನಲ್ಲಿ ಬಂದ ಕಿರಾತಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ನಡೆದಿದೆ. ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್​ ಹತ್ತಲು ಒಳದಾರಿಯಲ್ಲಿ ನಡೆದುಕೊಂಡು ಬರುವಾಗ ಘಟನೆ ನಡೆದಿದೆ.

ವಿದ್ಯಾರ್ಥಿನಿ ಗಾಬರಿಗೊಂಡು ಕೂಗಿಕೊಂಡಾದ ಸ್ಥಳೀಯರು ಜಮಾಯಿಸಿದ್ದಾರೆ. ಅಷ್ಟರಲ್ಲೇ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿಗೆ ಧೈರ್ಯ ತುಂಬಿ ನಂತರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Elgar Parishad case : ಹೋರಾಟಗಾರ್ತಿ ಸುಧಾ ಭಾರದ್ವಾಜ್​ಗೆ ಜಾಮೀನು

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಭಾಗದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ವಹಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಆರೋಪಿಯ ನಡೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.