ಸುಳ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆಪಾದನೆ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ಕಲ್ಲುಗುಂಡಿ ಎಂಬಲ್ಲಿನ ನಿವಾಸಿಯಾಗಿರುವ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಳ್ಯ ತಾಲೂಕಿನ ಕಲ್ಲುಗುಂಡಿಯ ನಿವಾಸಿಗಳಾದ ಭರತ್ ಚೆಡಾವು ಹಾಗೂ ರಾಕೇಶ್ ಕಲ್ಲುಗುಂಡಿ ಪ್ರಕರಣದ ಆರೋಪಿಗಳು.