ETV Bharat / state

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್ - ಲೈಂಗಿಕ ಕಿರುಕುಳ

ಪ್ರೀತಿಸುವ ನಾಟಕವಾಡಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
author img

By ETV Bharat Karnataka Team

Published : Jan 2, 2024, 8:47 AM IST

Updated : Jan 2, 2024, 11:03 AM IST

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಯಾದ ಆರೋಪಿಯನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಸುಮಾರು ನಾಲ್ಕು ತಿಂಗಳ ಹಿಂದೆ ಆಣಜೂರಿನ ಗ್ರಾಮದಿಂದ ಬಾಲಕಿಯನ್ನು ಮಂಗಳೂರಿನ ಪಂಪ್​ವೆಲ್​ಗೆ ಬಸ್‌ನಲ್ಲಿ ಕರೆಸಿಕೊಂಡಿದ್ದ. ಬಳಿಕ ಆತನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಮದುವೆಯಾಗುವುದಾಗಿ ಹೇಳಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಪ್ರಕರಣಗಳು-ಚಾಕು ತೋರಿಸಿ ಅತ್ಯಾಚಾರ: ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ, ಅಪ್ರಾಪ್ತೆಯ ಮೇಲೆ ಇಬ್ಬರು ಬಾಲಕರು ಅತ್ಯಾಚಾರ ಎಸಗಿದ್ದ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಳೆದ ತಿಂಗಳು ನಡೆದಿತ್ತು. ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮತ್ತೊಂದು ಪ್ರಕರಣದಲ್ಲಿ, 76 ವರ್ಷದ ವೃದ್ಧನೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿತ್ತು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.

ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ: ಇತ್ತೀಚೆಗೆ ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಆರೋಪ ಸಾಬೀತಾದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ದಾವಣಗೆರೆ ಜಿಲ್ಲಾ ಮತ್ತು ಸತ್ರ (ಎಫ್.ಟಿ.ಎಸ್.ಸಿ-1) ನ್ಯಾಯಾಲಯ 17 ಸಾವಿರ ರೂಪಾಯಿ ದಂಡಸಹಿತ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಹರಿಹರ ತಾಲೂಕಿನ ವ್ಯಕ್ತಿ, ಬಾಲಕಿಯನ್ನು ಪುಸಲಾಯಿಸಿ ಬಸ್‌ನಲ್ಲಿ ಬಲವಂತವಾಗಿ ನೆರೆ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದ. ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಕಂಬಕ್ಕೆ ಕಟ್ಟಿ ಥಳಿತ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಗ್ರಾಮ ಪಂಚಾಯತ್ ಸದಸ್ಯನೋರ್ವನನ್ನು ಸ್ಥಳೀಯರೇ ಥಳಿಸಿ ಠಾಣೆಗೆ ಒಪ್ಪಿಸಿದ್ದ ಘಟನೆ ಉತ್ತರಕನ್ನಡ ಜಿಲ್ಲೆ ಮುಂಡಗೋಡು ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ನಡೆದಿತ್ತು. ಬಾಲಕಿ ಆಟವಾಡುತ್ತಿದ್ದಾಗ ಆಕೆಯನ್ನು ಕರೆತಂದು ಆರೋಪಿ ಅತ್ಯಾಚಾರ ಎಸಗಿದ್ದ.

ಅಪರಾಧಿಗೆ 25 ವರ್ಷ ಕಠಿಣ ಜೈಲು: ಇತ್ತೀಚೆಗೆ ನಡೆದ ಪ್ರಕಣವೊಂದರಲ್ಲಿ ಅಪ್ರಾಪ್ತ ವಯಸ್ಸಿನ ನಾದಿನಿಯ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ವ್ಯಕ್ತಿಯೊಬ್ಬನಿಗೆ ಮೈಸೂರು ನಗರದ ಪೋಕ್ಸೋ ವಿಶೇಷ ನ್ಯಾಯಾಲಯ 25 ವರ್ಷಗಳ ಕಠಿಣ ಸಜೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು.

ಇದನ್ನೂ ಓದಿ: ವಾಕಿಂಗ್​ಗೆ​ ಹೋದ ಬಾಲಕಿ ಮೇಲೆ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ: ಹರಿದ ಬಟ್ಟೆಯಲ್ಲೇ ಪೊಲೀಸ್​ ಠಾಣೆಗೆ ಬಂದ ಸಂತ್ರಸ್ತೆ

Last Updated : Jan 2, 2024, 11:03 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.