ETV Bharat / state

ಗುರುವಾರದಿಂದ ಒಂದು ವಾರ ದ.ಕ ಜಿಲ್ಲೆ ಲಾಕ್​ಡೌನ್​​: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

author img

By

Published : Jul 13, 2020, 2:52 PM IST

ಬುಧವಾರದವರೆಗೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಬುಧವಾರ ರಾತ್ರಿ ಬಳಿಕ ಲಾಕ್​ಡೌನ್ ಜಾರಿಯಾಗಲಿದೆ. ಅದರ ಮಾರ್ಗಸೂಚಿ ಹಾಗೂ ನಿಯಮಗಳನ್ನು ಆದಷ್ಟು ಶೀಘ್ರದಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಗೊಳಿಸಲಿದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

shirinivas pujari
ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಗುರುವಾರದಿಂದ ಒಂದು ವಾರ ಕಾಲ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಲಾಕ್​​ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರದವರೆಗೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಬುಧವಾರ ರಾತ್ರಿ ಬಳಿಕ ಲಾಕ್​ಡೌನ್ ಜಾರಿಯಾಗಲಿದೆ. ಅದರ ಮಾರ್ಗಸೂಚಿ ಹಾಗೂ ನಿಯಮಗಳನ್ನು ಆದಷ್ಟು ಶೀಘ್ರದಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಗೊಳಿಸಲಿದ್ದಾರೆ ಎಂದು ತಿಳಿಸಿದರು.

ಲಾಕ್​​ಡೌನ್​ನ ಅನಿವಾರ್ಯತೆ ಇದ್ದಲ್ಲಿ ಆಯಾ ಜಿಲ್ಲೆಯವರು ನಿರ್ಧಾರ ಕೈಗೊಳ್ಳಲು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣ ಮಾಡುವಲ್ಲಿ ಲಾಕ್​​ಡೌನ್ ಅನಿವಾರ್ಯವಾಗಿದೆ. ಜನಪ್ರತಿನಿಧಿಗಳು ಮತ್ತು ಜನಸಾಮಾನ್ಯರ ಅಭಿಪ್ರಾಯದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.