ಮಂಗಳೂರು (ದ.ಕ): ಅಂಗಡಿಗೆ ಬಂದಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಾಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ. ಆರೋಪಿ ಉಸ್ಮಾನ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಕೊಣಾಜೆ ಜಂಕ್ಷನ್ನಲ್ಲಿ ದಿನಸಿ ಹಾಗೂ ಸ್ವೀಟ್ಸ್ ಅಂಗಡಿ ಹೊಂದಿದ್ದಾನೆ. ಭಾನುವಾರ ಬಾಲಕಿ ಅಂಗಡಿಗೆ ಬಂದಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.
ಈ ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಸ್ಥಳದಲ್ಲಿ ನೆರೆದಿದ್ದ ಜನರನ್ನು ಕಳುಹಿಸಿದ್ದಾರೆ. ಈ ವೇಳೆ ಕೆಲವರು ಉಸ್ಮಾನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿದೂರು ದಾಖಲಿಸಲಾಗಿದೆ.
ಇದನ್ನೂ ಓದಿ: ಬಂಟ್ವಾಳ ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ : ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ ಕೋರ್ಟ್