ಮಂಗಳೂರು: ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಮನೆಯೊಂದು ಸುಟ್ಟುಹೋದ ಘಟನೆ ನಗರದ ಪಂಪ್ ವೆಲ್ ನಂತೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಡೆದಿದೆ.
ನವೀನ್ ತಾರೆತೋಟ ಎಂಬುವವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಸುಮಾರು 4 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕದ್ರಿ ಅಗ್ನಿಶಾಮಕ ದಳದಿಂದ ಕಾರ್ಯಚರಣೆ ನಡೆಸಿದ್ದು, ಈ ವೇಳೆಗಾಗಲೇ ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಹೋಗಿದೆ.