ETV Bharat / state

ಬಂಟ್ವಾಳದ ಯುವಕರ ಕಾರ್ಯಕ್ಕೆ ಸಿದ್ದರಾಮಯ್ಯ ಮೆಚ್ಚುಗೆ - Siddaramaiah latest news

ಬಂಟ್ವಾಳದ ಪಾಣೆ ಮಂಗಳೂರಿನ ನೇತ್ರಾವತಿ ನದಿಗೆ ಸೇತುವೆ ಮೇಲಿಂದ ಹಾರಿದ ಯುವಕನನ್ನು ಕೆಲವರು ರಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇಂದು ರಕ್ಷಣಾ ಕಾರ್ಯಕ್ಕೆ ಮುಂದಾದವರನ್ನು ಅಭಿನಂದಿಸಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : May 25, 2020, 9:35 PM IST

ಬಂಟ್ವಾಳ (ದ.ಕ.) : ಭಾನುವಾರ ನೇತ್ರಾವತಿ ನದಿಗೆ ಹಾರಿದ ಯುವಕನೊಬ್ಬನ ಪ್ರಾಣರಕ್ಷಣೆಗೆ ಮುಂದಾದ ಯುವಕರ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿವೆ. ಬಂಟ್ವಾಳ ಮತ್ತು ಮಂಗಳೂರಿನಲ್ಲಿ ನಾನಾ ಸಂಘಟನೆಗಳು ಅವರನ್ನು ಸನ್ಮಾನಿಸಿದ್ದಾರೆ. ಟ್ವಿಟರ್, ವಾಟ್ಸ್​ಆ್ಯಪ್, ಫೇಸ್​ಬುಕ್ ಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ವಿಟರ್​​​ ಖಾತೆಯಲ್ಲಿ, ಬಂಟ್ವಾಳದ ಯುವಕರ ಸಾಹಸ ಕಾರ್ಯವನ್ನು ಮೆಚ್ಚಿ ಟ್ವೀಟ್ ಮಾಡಿದ್ದಾರೆ.

  • ಬಂಟ್ವಾಳದಲ್ಲಿ ನದಿಗೆ ಹಾರಿದ್ದ ಹಿಂದೂ ಯುವಕನನ್ನು ಉಳಿಸಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ನಾಲ್ವರು ಮುಸ್ಲಿಮ್ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇಬೇಕು.

    ಧರ್ಮದ ಹೆಸರಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆಗಳು. pic.twitter.com/hVKhOAVp7L

    — Siddaramaiah (@siddaramaiah) May 25, 2020 " class="align-text-top noRightClick twitterSection" data=" ">

ಬಂಟ್ವಾಳದಲ್ಲಿ ನದಿಗೆ ಹಾರಿದ್ದ ಹಿಂದೂ ಯುವಕನನ್ನು ಉಳಿಸಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಬ್ಬಾಶ​ ಎನ್ನಲೇಬೇಕು. ಧರ್ಮದ ಹೆಸರಲ್ಲಿ ಮನೆ, ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳನ್ನು ನಡೆಸುವವರ ನಡುವೆ, ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಯುವಕರಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.