ETV Bharat / state

ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಕರ್ ಫರ್ನಾಂಡಿಸ್: ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

ಇಂದು ಸಂಜೆ ಮಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್ ಹಾಗು ಸಿದ್ದರಾಮಯ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ.

siddaramaih and dk shivakumar visit manglore hospital
ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ
author img

By

Published : Jul 22, 2021, 9:37 PM IST

ಮಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ‌ ಗಂಭೀರ ಸ್ಥಿತಿಯಲ್ಲಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆ ಭೇಟಿ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಸ್ಕರ್ ಫರ್ನಾಂಡಿಸ್ ಅವರು ಮಾಧ್ಯಮದಲ್ಲಿ ಪ್ರಸಾರವಾಗುವಂತೆ ಚಿಂತಾಜನಕ ಸ್ಥಿತಿಯಲ್ಲಿಲ್ಲ. ವೈದ್ಯರೊಂದಿಗೆ ಚರ್ಚಿಸಿದ ವೇಳೆ ಅವರು ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದರು.

ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಕರ್ ಫರ್ನಾಂಡಿಸ್​​ ಅವರು ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿದ್ದಾರೆ ಎಂದರು. ಸಂಜೆ ವೇಳೆಗೆ ಮಂಗಳೂರಿಗೆ ಆಗಮಿಸಿದ ಈ ಇಬ್ಬರು ನಾಯಕರು ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ಹಿರಿಯ ನಾಯಕ ಆಸ್ಕರ್ ಅವರ ಆರೋಗ್ಯ ವಿಚಾರಿಸಿದರು.

ಯೋಗ ಮಾಡುವ ವೇಳೆ ಜಾರಿ ಬಿದ್ದು, ಅದೇ ದಿನ ಡಯಾಲಿಸಿಸ್​​ಗೆ ಆಗಮಿಸಿದ್ದ ಆಸ್ಕರ್ ಅವರನ್ನು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಅವರ ತಲೆಯ ಒಳಭಾಗದಲ್ಲಿ ಗಾಯವಾಗಿ ಮೆದುಳಿನ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡು ಬಂದಿತ್ತು. ಬಳಿಕ ಆಸ್ಕರ್ ಫರ್ನಾಂಡಿಸ್​​ ಕೋಮಾ ಸ್ಥಿತಿಗೆ ತಲುಪಿದ್ದರು. ಅವರಿಗೆ ನಿನ್ನೆ ಮತ್ತು ಇಂದು ಡಯಾಲಿಸಿಸ್ ಚಿಕಿತ್ಸೆ ನೀಡಲಾಗಿದೆ.

ಆಸ್ಕರ್ ಫರ್ನಾಂಡಿಸ್ ಆರೋಗ್ಯ ಪರಿಸ್ಥಿತಿ ಬಗ್ಗೆ ಅವರ ಪತ್ನಿ ಬ್ಲೋಸಂ ಡಿಸೋಜ, ಕುಟುಂಬ ವರ್ಗ ಹಾಗು ವೈದ್ಯರೊಂದಿಗೆ ಇಬ್ಬರು ನಾಯಕರು ಚರ್ಚೆ ನಡೆಸಿದರು. ನಿನ್ನೆ ಕಾಂಗ್ರೆಸ್ ಹಿರಿಯ ನಾಯಕ‌ ಜನಾರ್ದನ ಪೂಜಾರಿ, ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ್ , ಮಾಜಿ ಸಚಿವ ಹೆಚ್​​.ಕೆ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ನಾಳಿನ ಕಾರ್ಯಕ್ರಮ ಮುಂದೂಡಿಕೆ:

ಮಂಗಳೂರಿನಲ್ಲಿ ಜು.23 ರಂದು ಆಯೋಜಿಸಲಾಗಿದ್ದ ಐದು ಜಿಲ್ಲೆಗಳ ಕಾಂಗ್ರೆಸ್ ಮುಖಂಡರುಗಳ ಸಭೆಯನ್ನು ಮುಂದೂಡಲಾಗಿದೆ. ಆಸ್ಕರ್ ಫರ್ನಾಂಡಿಸ್​​ ಅವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಈ ಸಭೆಯನ್ನು ಮುಂದೂಡಲಾಗಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾಗಿಯಾಗುವ ಬಗ್ಗೆ ಈ ಮೊದಲು ನಿರ್ಧಾರವಾಗಿತ್ತು. ಈ ಕಾರ್ಯಕ್ರಮ ಮುಂದೂಡಿರುವ ಹಿನ್ನೆಲೆ ಇಂದು ಸಂಜೆ ಮಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್ ಹಾಗು ಸಿದ್ದರಾಮಯ್ಯ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್​ಗೆ ಡಯಾಲಿಸಿಸ್ ಶುರು: ಡಿಕೆಶಿ ಭೇಟಿ ಸಾಧ್ಯತೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.