ಬಂಟ್ವಾಳ/ದಕ್ಷಿಣ ಕನ್ನಡ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಈ ಬಾರಿ ಕೇವಲ ಸಾಂಪ್ರದಾಯಿಕವಾಗಿ ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ತಿಳಿಸಿದ್ದಾರೆ
ಕೊರೊನಾ ಹರಡುವ ಭೀತಿ ಹಿನ್ನೆಲೆ ಧಾರ್ಮಿಕ ದತ್ತಿ ಆಯುಕ್ತರ ಆದೇಶದಂತೆ ಏ.13ರಿಂದ ಸರಳವಾಗಿ ಜಾತ್ರೆ ನಡೆಯಲಿದ್ದು, ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶ ಇರುವುದಿಲ್ಲ. ದೇವಸ್ಥಾನದ ಒಳಗಿನ ಪ್ರಾಕಾರದೊಳಗಷ್ಟೇ ಜಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.
ಅಲ್ಲದೇ ಏ.16ರ ರಥೋತ್ಸವ, ಕಟ್ಟೆಪೂಜೆ, ದೈವಗಳ ನೇಮಗಳೂ ಸಹ ಇರುವುದಿಲ್ಲ ಎಂದು ಅವರು ತಿಳಿಸಿದರು.