ETV Bharat / state

ಪುತ್ತೂರಲ್ಲಿ ಬಾಣಂತಿ ಸೇರಿ 6 ಜನರಲ್ಲಿ ಕೊರೊನಾ ಸೋಂಕು ಪತ್ತೆ! - Putturu corona latest news

ಪುತ್ತೂರಿನಲ್ಲಿ ಇಂದು ಒಂದೇ ದಿನ ಆರು ಜನರಿಗೆ ಕೊರೊನಾ ಸೋಂಕು ತಗುಲಿದೆ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹತ್ತು ದಿನಗಳ ಹಿಂದೆಯಷ್ಟೆ ಹೆರಿಗೆ ಆಗಿದ್ದ ಮಹಿಳೆಗೂ ಸೋಂಕು ತಗುಲಿದೆ.

Putturu
Putturu
author img

By

Published : Jun 27, 2020, 9:11 PM IST

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಇಂದು ಬಾಣಂತಿ ಸೇರಿ ಆರು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರಿಂದ ಜನತೆ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ 'ಡಿ' ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶಾಂತಿಗೋಡು ಬಳಿಯ ಮಹಿಳೆ, ಅದೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಗರ್ಭಕೋಶದ ಚಿಕಿತ್ಸೆಗೆ ದಾಖಲಾಗಿದ್ದ ಇಬ್ಬರು ಮಹಿಳೆಯರು, ಪುತ್ತೂರಿನ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಬಜತ್ತೂರು ಕಾಂಚನದ ಓರ್ವ ವೃದ್ಧೆ ಮತ್ತು ಬಪ್ಪಳಿಗೆಯ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹತ್ತು ದಿನಗಳ ಹಿಂದೆಯಷ್ಟೆ ಹೆರಿಗೆ ಆಗಿದ್ದ ಮಹಿಳೆಗೂ ಸೋಂಕು ತಗುಲಿದೆ. ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಮತ್ತು ಸಿಬಂದಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.