ETV Bharat / state

ಯುವ ಜನರಿಗೆ ಕೌಶಲ್ಯಭಿವೃದ್ಧಿ ತರಬೇತಿಗಳನ್ನು ನೀಡಲು ಒತ್ತು ನೀಡಬೇಕು: ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ

author img

By

Published : Feb 6, 2021, 11:52 AM IST

ಮಹಿಳೆಯರಿಗೆ ಹೆಚ್ಚಾಗಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುವಲ್ಲಿ ಯುವ ಕೇಂದ್ರವು ಪ್ರಾಶಸ್ತ್ಯ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆ ಅಪರ ಜಿಲ್ಲಾಧಿಕಾರಿ ಎಮ್.ಜೆ ರೂಪಾ ಹೇಳಿದ್ರು.

skilled programmes for youths in dakshin kannada
ದಕ್ಷಿಣ ಕನ್ನಡ

ಮಂಗಳೂರು: ಯುವ ಜನರ ಜೀವನೋಪಾಯಕ್ಕೆ ದಾರಿಯಾಗುವ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಯುವ ಕೇಂದ್ರವು ನೀಡುವುದರೊಂದಿಗೆ ಅವರುಗಳು ಸ್ವ - ಉದ್ಯೋಗ ಕೈಗೊಂಡು ಸ್ವಾವಲಂಬಿಗಳನ್ನಾಗಿಸಲು ಮುಂದಾಗಬೇಕು ಎಂದು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕ್ರೀಡಾ ಸಚಿವಾಲಯ ಹಾಗೂ ನೆಹರೂ ಯುವ ಕೇಂದ್ರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನೆಹರೂ ಯುವ ಕೇಂದ್ರವು ಯುವಜನರಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸುವುದು ಸೇರಿದಂತೆ ಕಲೆ, ಸಂಸ್ಕೃತಿಗಳನ್ನು ಬೆಳೆಸಿ ಅವರನ್ನು ಸುಶಿಕ್ಷಿತರನ್ನಾಗಿ ಮಾಡಿ ಉತ್ತಮ ಸಮಾಜ ನಿರ್ಮಾಣ ಮಾಡುವುದರೊಂದಿಗೆ ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು. ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಾಗಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುವಲ್ಲಿ ಯುವ ಕೇಂದ್ರವು ಪ್ರಾಶಸ್ತ್ಯ ನೀಡಬೇಕು ಎಂದರು.

ಗ್ರಾಮೀಣ ಭಾಗದ ಮಹಿಳೆಯರ ತರಬೇತಿಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ಹಿಂದುಳಿದ ಗ್ರಾಮಗಳು ಅಥವಾ ಶಾಲೆಗಳನ್ನು ದತ್ತು ಪಡೆದು ಅವುಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಯುವ ಸಮನ್ವಯಧಿಕಾರಿ ರಘುವೀರ್ ಸೂಟರ್ ಪೇಟೆ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಕೌಶಲ್ಯಭಿವೃದ್ಧಿ ಇಲಾಖೆಯ ನೋಡಲ್ ಅಧಿಕಾರಿ ತಾರನಾಥ್, ಜಿಲ್ಲಾ ಅಗ್ರನಿ ಬ್ಯಾಂಕ್‍ನ ವ್ಯವಸ್ಥಾಪಕ ಪ್ರವೀಣ್, ಎನ್‍ಸಿಸಿ ನೋಡಲ್ ಅಧಿಕಾರಿ ಲೆಫ್ಟಿನೆಂಟ್ ಕಲೋನೆಲ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.