ETV Bharat / state

ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ನಿಧನ.. - ಈಟಿವಿ ಭಾರತ ಕನ್ನಡ

ಮಂಗಳೂರಿನಲ್ಲಿ ಬಿಎಸ್​ಎಫ್​​ ಯೋಧ ಹೃದಯಾಘಾತದಿಂದ ಸಾವು-ರಜೆಗೆಂದು ಊರಿಗೆ ಬಂದಿದ್ದ ಯೋಧ-21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ

soldier-died-of-a-heart-attack-in-manglore
ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತ್ಯು
author img

By

Published : Jan 1, 2023, 5:46 PM IST

ಮಂಗಳೂರು(ದಕ್ಷಿಣ ಕನ್ನಡ): ರಜೆಗೆಂದು ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಕುಲಶೇಖರದ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಮೃತಪಟ್ಟವರು.

ಬಿಎಸ್‌ಎಫ್ ಯೋಧರಾಗಿದ್ದ ಹರೀಶ್​ ಅವರು ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 142ನೇ ಬೆಟಾಲಿಯನ್ ಒಡಿಶಾದಲ್ಲಿ ಅವರು ಕರ್ತವ್ಯದಲ್ಲಿದ್ದರು. ಕಳೆದ ಕೆಲವು ದಿನಗಳ ಹಿಂದೆ ರಜೆಗೆಂದು ಊರಿಗೆ ಬಂದಿದ್ದ ಹರೀಶ್​ ಅವರಿಗೆ ಡಿ.31ರಂದು ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದೂವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ : ಬಂಟ್ವಾಳದ ನಾವೂರಿನಲ್ಲಿ ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.