ಸುಬ್ರಹ್ಮಣ್ಯ: 2006 ನೇ ಇಸವಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾಷಷ್ಠಿ ಮಹೋತ್ಸವದಲ್ಲಿ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ನಡೆಸಿದ ಸಂಗೀತ ಕಾರ್ಯಕ್ರಮವನ್ನು ಇಂದಿಗೂ ಹಲವರು ನೆನಪಿಸುತ್ತಾರೆ.
ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ 14 ವರ್ಷಗಳ ಹಿಂದೆ ಬಾಲಸುಬ್ರಹ್ಮಣ್ಯಂ ಹಾಗೂ ಸಂಗಡಿಗರು ಸುಮಾರು ಮೂರು ಗಂಟೆಗಳ ಕಾಲ ಸಂಗೀತ ಕಾರ್ಯಕ್ರಮ ನೀಡಿದ್ದರು. ಈ ಸಂದರ್ಭದಲ್ಲಿ ಇವರನ್ನು ಸುಳ್ಯ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಪರವಾಗಿ ಡಾ.ಕೆ.ವಿ ರೇಣುಕಾಪ್ರಸಾದ್ ಗೌರವಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆದ ಈ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದಿಗೂ ಇಲ್ಲಿನ ಹಿರಿಯರು ನೆನಪಿಸುತ್ತಾರೆ.