ಬೆಳ್ತಂಗಡಿ : ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಹೆಗ್ಗಡೆಯವರು ಸ್ಪೀಕರ್ ಕಾಗೇರಿಯವರನ್ನು ಕ್ಷೇತ್ರದ ಪರವಾಗಿ ಗೌರವಿಸಿದರು.

ನಂತರ ಕಾಗೇರಿಯವವರು ಕನ್ಯಾಡಿ ಶ್ರೀ ಗುರುದೇವ ಮಠದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಪಾದಪೂಜೆ ಸಲ್ಲಿಸಿ ಬಳಿಕ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡರು.