ETV Bharat / state

ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಅಪರೂಪದ ಹೃದಯ ಶಸ್ತ್ರಚಿಕಿತ್ಸೆ

ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿಅತ್ಯಂತ ಅಪರೂಪದ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

special-achievement-from-mangaluru-indiana-hospital
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಅಪರೂಪದ ಹೃದಯ ಶಸ್ತ್ರಚಿಕಿತ್ಸೆ
author img

By

Published : Jun 28, 2021, 11:56 PM IST

ಮಂಗಳೂರು: ಪಂಪ್ವೆಲ್​​ನಲ್ಲಿರುವ ಇಂಡಿಯಾನಾ ಆಸ್ಪತ್ರೆಯಲ್ಲಿ 70 ವರ್ಷದ ರೋಗಿಯೊಬ್ಬರಿಗೆ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಮೊದಲ ಬಾರಿಗೆ ಇಂತಹ ಕ್ಲಿಷ್ಟಕರ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಗೋವಾದ ರೋಗಿಯೊಬ್ಬರು ಸೈನೋಸಿಸ್​​ನಿಂದ ಬಳಲುತ್ತಿದ್ದರು. ಅವರಿಗೆ ಎದೆನೋವು, ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿಸಿದ ಸಮಸ್ಯೆಗಳಿದ್ದವು. ಇಂಡಿಯಾನ ಆಸ್ಪತ್ರೆಯಲ್ಲಿ ಹೃದಯದ ಧಮನಿಯ ಬ್ಲಾಕ್‌ಗಳನ್ನು ಆ್ಯಂಜಿಯೋಪ್ಲಾಸ್ಟಿ ಮತ್ತು ಟ್ರಾನ್ಸ್ ಕ್ಯಾಥಿಟರ್ ಆರ್ಟಿಕ್ ವಾಲ್ವ್ ಇಂಪ್ಲಾಂಟೇಷನ್ ಮೂಲಕ ತೆರವುಗೊಳಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿಸಿದರು.

ವೈದ್ಯರಾದ ಯೂಸುಫ್ ಕುಂಬ್ಳೆ

ಈ ರೋಗಿ ಈ ಹಿಂದೆ ಕವಾಟಗಳನ್ನು ಬದಲಾಯಿಸಲು ಹಾಗೂ ಹೃದಯದಲ್ಲಿನ ಬ್ಲಾಕ್ ತೆಗೆಯಲು ಎರಡು ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಮತ್ತೆ ಶಸ್ತ್ರಚಿಕಿತ್ಸೆ ನಡೆಸುವುದು ಸವಾಲಿನ ಕೆಲಸವಾಗಿತ್ತು. ಆದರೂ ಒಂದು ಗಂಟೆ ಅವಧಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಐಸಿಯುವಿನಲ್ಲಿ 24 ಗಂಟೆಗಳ ನಿಗಾವಹಿಸಿ ಎರಡು ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಒಂದಲ್ಲ, ಎರಡಲ್ಲ, ಮಹಿಳೆಗೆ ಒಂದೇ ದಿನ ಮೂರು ಸಲ ಕೋವಿಡ್​ ವ್ಯಾಕ್ಸಿನ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.