ETV Bharat / state

ಶ್ರೀರಾಮ ಮಂದಿರ ಶಿಲಾನ್ಯಾಸ: ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಸಂಭ್ರಮಾಚರಣೆ - ಪ್ರಭಾಕರ್ ಭಟ್

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಶಂಖನಾದ ಮೂಲಕ ಸಂಭ್ರಮಾಚರಣೆ ನಡೆಯಿತು. ಈ ವೇಳೆ ಆರ್​​​ಎಸ್​​ಎಸ್​ನ ಹಿರಿಯ ನಾಯಕ ಡಾ.ಪ್ರಭಾಕರ್ ಭಟ್ ಅವರನ್ನು ಸನ್ಮಾನಿಸಲಾಯಿತು.

Kalladka Prabhakar
Kalladka Prabhakar
author img

By

Published : Aug 5, 2020, 7:40 PM IST

ಬಂಟ್ವಾಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ನೇರ ಪ್ರಸಾರವನ್ನು ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಭಕ್ತರು ವೀಕ್ಷಿಸಿದರು.

ಶಿಲಾನ್ಯಾಸ ಸಂದರ್ಭ ಶಂಖ, ಜಾಗಟೆ, ಚಂಡೆ ವಾದ್ಯದ ಮೂಲಕ ವಿಜಯೋತ್ಸವದ ಸಂಭ್ರಮವನ್ನು ಆಚರಿಸಲಾಯಿತು. ಬಳಿಕ ಭಜನಾ ಕಾರ್ಯಕ್ರಮ, ಮಹಾ ಮಂಗಳಾರತಿ ನಡೆಯಿತು. ಇದೇ ವೇಳೆ ಸಿಹಿತಿಂಡಿ ವಿತರಿಸಲಾಯಿತು.

Kalladka Prabhakar
ಕಲ್ಲಡ್ಕ ಪ್ರಭಾಕರ್

ಅಯೋಧ್ಯೆ ಕರಸೇವೆ ವೇಳೆ ಅದರ ನೇತೃತ್ವ ವಹಿಸಿದ್ದ ಹಿರಿಯ ಆರ್​ಎಸ್​ಎಸ್​ ನಾಯಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಧ್ಯಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಸನ್ಮಾನಿಸಲಾಯಿತು.

ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ಶ್ರೀರಾಮನಿಗೆ ಪೂಜೆ ನೆರವೇರಿಸಿದರು. ಈ ವೇಳೆ ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ, ರಾಷ್ಟ್ರಸೇವಿಕಾ ಪ್ರಾಂತ ಪ್ರಮುಖ್ ಕಮಲಾ ಪ್ರಭಾಕರ ಭಟ್, ಶ್ರೀರಾಮ ಮಂದಿರ ಆಡಳಿತ ಸಮಿತಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ವಿಹಿಂಪ ವಿಟ್ಲ ಪ್ರಖಂಡ ಅಧ್ಯಕ್ಷ ಕ.ಕೃಷ್ಣಪ್ಪ, ಬಜರಂಗದಳ ವಿಟ್ಲ ಅಧ್ಯಕ್ಷ ಮಿಥುನ್ ಸಹಿತ ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.