ಬಂಟ್ವಾಳ: ಕೊರೊನಾ ಆತಂಕದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದರ ಹಿನ್ನೆಲೆ ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ತಾಲೂಕಿನ ಶಿಕ್ಷಕರ ತಂಡವನ್ನು ಅಭಿನಂದಿಸಿದ ಅವರು, ನಿರಾತಂಕವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮಕ್ಕಳು ಹಾಗೂ ಅವರಿಗೆ ನೆರವಾದ ಪೋಷಕರಿಗೆ ಧನ್ಯವಾದ ಸಲ್ಲಿಸಿದರು.
ಈ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಶಿಕ್ಷಣಾಧಿಕಾರಿ ಜ್ಞಾನೇಶ್ ಮತ್ತು ಇತರರು ಈ ವೇಳೆ ಉಪಸ್ಥಿತರಿದ್ದರು.